Homeಮುಖಪುಟರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ- ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

“ಈಗ ನಡೆಯುತ್ತಿರುವ ರೈತ ಹೋರಾಟ ಸರ್ಕಾರದ ವಿರುದ್ಧವೋ ಅಥವಾ ಕಾಂಗ್ರೆಸ್‌ನ ಪರವೋ ಅಲ್ಲ. ಇದು ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶಕ್ಕಾಗಿ ನಡೆಯುತ್ತಿರುವ ಹೋರಾಟ” ಎಂದು ರಾಜ್ಯದ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಬೆಳಗಾವಿಯಲ್ಲಿ ಹೇಳಿದ್ದಾರೆ.

ಇಂದು (ಮಾ.13) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಯಾವುದೇ ಮೈದಾನವನ್ನೂ ನೀಡುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

“ಶಿವಮೊಗ್ಗದಲ್ಲಿ ಮಾ.20ರಂದು ಹಾಗೂ ಹಾವೇರಿಯಲ್ಲಿ ಮಾ.21ರಂದು ಮಹಾಪಂಚಾಯತ್ ಹಮ್ಮಿಕೊಂಡಿದ್ದು, ಅಲ್ಲಿ ಮೈದಾನಗಳು ದೊರೆತಿವೆ. ಆದರೆ, ಬೆಳಗಾವಿಯಲ್ಲಿ ಮುಂಬರುವ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರವು ಅಧಿಕಾರಿಗಳ ಮೇಲೆ ಒತ್ತಡ ತಂದು ಮೈದಾನ ಸಿಗದಂತೆ ಮಾಡಿದೆ” ಎಂದು ಆರೋಪಿಸಿದರು.

ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತದ ಅಸಹಕಾರದ ನಡುವೆಯೂ ನಾವು ಚಳವಳಿ ನಡೆಸಿಯೇ ತೀರುತ್ತೇವೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್ ಗಾಂಧಿ ಪ್ರಶ್ನೆ

“ಕೇಂದ್ರದ ರೈತ ವಿರೋಧಿ ಧೋರಣೆಯನ್ನು ಜನರ ಮುಂದೆ ತೆರೆದಿಡಬೇಕಾಗಿದೆ. ಹೀಗಾಗಿ, ರಾಣಿ ಚನ್ನಮ್ಮ ವೃತ್ತದಲ್ಲೇ ವಿಭಾಗ ಮಟ್ಟದ ಮಹಾಪಂಚಾಯತ್ ನಡೆಸುವುದು ಅನಿವಾರ್ಯವಾಗಿದೆ. ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಮುಖ್ಯವಾಗಿ ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಡಾ.ದರ್ಶನ್ ಪಾಲ್ಗೊಳ್ಳಲಿದ್ದು, ರೈತ ಮುಖಂಡ ಯೋಗೇಂದ್ರ ಯಾದವ್‍ಗೆ ಆಹ್ವಾನ ನೀಡಿದ್ದೇವೆ” ಎಂದು ಮಾಹಿತಿ ನೀಡಿದರು.

ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ ಎಂದು ಪ್ರಶ್ನಿಸಿ ಅವರು, ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ, “ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ” ಎಂದರು.

ಸಮನ್ವಯ ಸಮಿತಿ ಸದಸ್ಯ ಶಿವರಾಯಪ್ಪ ಜೋಗಿನ, ಮುಖಂಡರಾದ ಸಿದಗೌಡ ಮೋದಗಿ, ಮಂಜು ಕಿರಣ್, ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ, ಶಿವಪ್ಪ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...