Homeಮುಖಪುಟರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

"ಯಾವುದು ಸರಿ, ಯಾವುದು ತಪ್ಪು ಎಂದು ಚರ್ಚಿಸುವುದಿಲ್ಲ. ರೈತರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ ದೊರೆತರೆ ಸಾಕು. ಅವರು (ರೈತರು) ನಡುಕ ಹುಟ್ಟಿಸುವ ಚಳಿಯಲ್ಲಿ ಚಿಕ್ಕ ಮಕ್ಕಳೊಂದಿಗೆ ಹೆದ್ದಾರಿಗಳಲ್ಲಿ ಕುಳಿತಿದ್ದಾರೆ"

- Advertisement -
- Advertisement -

ಇತ್ತೀಚೆಗೆ ಸದಾ ಚಾಲ್ತಿಯಲ್ಲಿಯಲ್ಲಿರುವ ಸೋನು ಸೂದ್ ಈಗ ರೈತರ ಸಂಕಷ್ಟ ಮತ್ತು ಅವರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪತ್ರಕರ್ತೆಯಾದ ಬರ್ಖಾ ದತ್ ಅವರ ‘ವಿ ದಿ ವುಮೆನ್’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದ ಸೋನು ಸೂದ್, “ತುಂಬಾ ಬೇಸರವಾಗಿದೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದೆ. ನಾನು ಹುಟ್ಟಿ ಬೆಳೆದಿದ್ದು ಪಂಜಾಬ್‌ನಲ್ಲಿ. ಅಲ್ಲಿನ ರೈತರ ಜೊತೆ ಸಮಯ ಕಳೆದಿದ್ದೇನೆ. ಸ್ವಲ್ಪ ಸಮಯ ನೀಡಿದರೆ ಪಂಜಾಬ್ ಸಮುದಾಯಕ್ಕೆ ಪ್ರೀತಿಯಿಂದ ಮನವರಿಕೆ ಮಾಡಿಕೊಡಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

“ರೈತರ ಪ್ರತಿಭಟನೆ ವಿಚಾರದಲ್ಲಿ ಚರ್ಚೆ ನಡೆಸಲು ಬಯಸುವುದಿಲ್ಲ ಎಂದಿದ್ದಾರೆ. ಯಾವುದು ಸರಿ, ಯಾವುದು ತಪ್ಪು ಎಂದು ಚರ್ಚಿಸುವುದಿಲ್ಲ. ರೈತರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ ದೊರೆತರೆ ಸಾಕು. ಅವರು (ರೈತರು) ನಡುಕ ಹುಟ್ಟಿಸುವ ಚಳಿಯಲ್ಲಿ ಚಿಕ್ಕ ಮಕ್ಕಳೊಂದಿಗೆ ಹೆದ್ದಾರಿಗಳಲ್ಲಿ ಕುಳಿತಿದ್ದಾರೆ. ಕೆಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಎಷ್ಟು ದಿನ ನಾವಿದನ್ನು ನೋಡುತ್ತಾ ಇರಬೇಕು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ನಿನ್ನೆ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ:ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಸಿನಿಮಾದಲ್ಲಿ ದುಡ್ಡು ಮಾಡಲು ರೈತರ ಪಾತ್ರಗಳನ್ನು ಬಳಸಿಕೊಳ್ಳುವ ನಟರು ಈಗ ಯಾರೂ ಬೆಂಬಲಸುತ್ತಿಲ್ಲ… ಯಾಕೆ…

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...