Homeಕರ್ನಾಟಕಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

- Advertisement -
- Advertisement -

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಅವರು, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ.

”ಮಳೆ ಇದ್ದರೂ ಈ ಹೋರಾಟದಲ್ಲಿ ಭಾಗವಹಿಸಿ ಬಡವರ ಅನ್ನಕ್ಕೆ ಹೋರಾಟ ಮಾಡಿ ಇತಿಹಾಸ ನಿರ್ಮಿಸಿದ್ದೀರಿ ನಿಮಗೆ ಧನ್ಯವಾದಗಳು.. ಈ ಹೋರಾಟವನ್ನು ತಾಲೂಕು ಮಟ್ಟದಲ್ಲಿ ನಡೆಸಿ ಹಳ್ಳಿ ಹಳ್ಳಿ ಜನರಿಗೆ ಕೇಂದ್ರದ ಬಡವರ ವಿರೋಧಿ ನೀತಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...