ಬೆಂಗಳೂರಿನ ಮಹಾತ್ಮ ಗಾಂಧಿ (ಎಂ.ಜಿ) ರಸ್ತೆಯಲ್ಲಿರುವ ಮದ್ಯದಂಗಡಿಗಳಿಗೆ ಪರವಾನಗಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ಅನ್ನು ವಜಾಗೊಳಿಸಿದ ಹೈಕೋರ್ಟ್, “ಮಹಾತ್ಮ ಗಾಂಧಿಯವರ ಪ್ರತಿಮೆ ಇರುವ ಸ್ಥಳ ಧಾರ್ಮಿಕ ಸ್ಥಳವಲ್ಲ” ಎಂದು ಹೇಳಿದೆ.
ಎಂ.ಜಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿರುವ ‘ಟಾನಿಕ್’ ಮದ್ಯದಂಗಡಿಯನ್ನು ಆಕ್ಷೇಪಿಸಿ, ವಕೀಲ ಎ.ವಿ.ಅಮರ್ ನಾಥ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸಿತು.
“ಗಾಂಧಿಯವರನ್ನು ನಿರ್ಧಿಷ್ಟ ದಿನಗಳಲ್ಲಿ ಸಾರ್ವಜನಿಕರು ಆರಾಧಿಸುತ್ತಾರೆಂಬ ಕಾರಣಕ್ಕೆ ಆ ಸ್ಥಳವನ್ನು ಧಾರ್ಮಿಕ ಸ್ಥಳವೆಂದು ಪರಿಗಣಿಸಲು ಸಾಧ್ಯವಿಲ್ಲ. ಹಾಗಾಗಿ ಅಲ್ಲಿ ಮದ್ಯದಂಗಡಿಗೆ ಪರವಾನಗಿ ಕೊಡಲಾಗುವುದಿಲ್ಲ ಎಂದು ಹೇಳಲಾಗುವುದಿಲ್ಲ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!
“ಗಾಂಧೀಜಿ, ಮದ್ಯವನ್ನು ವಿರೋಧಿಸಿದ್ದರು. ಬೆಂಕಿ ದೇಹವನ್ನು ನಾಶ ಮಾಡಿದರೆ, ಕುಡಿತ ದೇಹ ಮತ್ತು ಆತ್ಮ ಎರಡನ್ನೂ ನಾಶಮಾಡುತ್ತದೆ ಎಂಬ ಅಭಿಪ್ರಾಯವನ್ನು ಹೊಂದಿದ್ದರು. ಹಾಗಾಗಿ ಅವರ ಪ್ರತಿಮೆ ಇರುವ ಪ್ರದೇಶದಲ್ಲಿ ಮದ್ಯದಂಗಡಿ ಇರಕೂಡದು” ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.
ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. ಹೈಕೋರ್ಟ್‌ನ ಈ ಅಭಿಪ್ರಾಯಯಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. “ಹೈಕೋರ್ಟ್‌ನ ಈ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ” ಎಂದು ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
This interpretation can not be accepted. pic.twitter.com/LOsA7T0jZZ
— S.Suresh Kumar, Minister – Govt of Karnataka (@nimmasuresh) September 9, 2020
ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್ ವಿವರ


