Homeಕರ್ನಾಟಕಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

‘ಗೆದ್ದ ದ್ವೇಷ, ಸೋತ ಕಲಾವಿದ, ವಿದಾಯ!’ ಎಂದು ಬೆಂಗಳೂರು ಕಾರ್ಯಕ್ರಮ ರದ್ದಾಗಿದ್ದಕ್ಕೆ ಮುನಾವರ್‌ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ದೇಶದ ಖ್ಯಾತ ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವೊಂದು ಭಾನುವಾರ(ಇಂದು) ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಆದರೆ ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು ಕಾನೂನು ಸುವ್ಯವಸ್ಥೆಗೆ ಭಂಗ ಆಗುತ್ತದೆ ಎಂದು ಈ ಹೇಳಿ ಆಯೋಜಕರಿಗೆ ಪತ್ರವನ್ನು ಬರೆದದ್ದರಿಂದ, ಆಯೋಜಕರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಮೇಡಿಯನ್ ಮುನಾವರ್‌, ‘‘ದ್ವೇಷ ಗೆದ್ದಿದೆ, ಕಲಾವಿದ ಸೋತುಬಿಟ್ಟ, ನಾನು ಮುಗಿಸುತ್ತಿದ್ದೇನೆ! ವಿದಾಯ! ಅನ್ಯಾಯ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಯೋಜಕರಿಗೆ ಬೆಂಗಳೂರು ಪೊಲೀಸರು ಬರೆದಿರುವ ಪತ್ರದಲ್ಲಿ, “ಮುನಾವರ್‌ ಫಾರೂಖಿ ಒಬ್ಬರು ವಿವಾದಾತ್ಮಕ ವ್ಯಕ್ತಿಯಾಗಿದ್ದು, ಅವರು ಇತರ ಧರ್ಮಗಳ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುವಂತಹ ವ್ಯಕ್ತಿ ಎಂದು ನಮಗೆ ತಿಳಿದು ಬಂದಿದೆ. ಆದ್ದರಿಂದ ಹಲವು ರಾಜ್ಯಗಳಲ್ಲಿ ಅವರ ಕಾರ್ಯಕ್ರಮಗಳು ರದ್ದಾಗಿವೆ. ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದೆ. ಅವರ ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ನಮಗೆ ಮಾಹಿತಿಯಿದೆ. ಅವರ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ಧತೆ ಹಾಳಾಗುತ್ತದೆ, ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಆದ್ದರಿಂದ ಭಾನುವಾರ ನಡೆಯಲಿರುವ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು” ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಕಾರ್ಯಕ್ರಮ ಆಯೋಜಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರಲ್ಲಿ, “ಬೆದರಿಕೆಗಳು ಬಂದ ಹಿನ್ನಲೆ, ಬೆಂಗಳೂರಿನಲ್ಲಿ ಇಂದು ನಡೆಯಲಿದ್ದ ಶೋ ರದ್ದಾಗಿದೆ. ನಾವು 600+ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇವೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸಂಸ್ಥೆಗೆ ದೇಣಿಗೆ ಸಂಗ್ರಹಕ್ಕಾಗಿ ತಿಂಗಳ ಹಿಂದೆ ನನ್ನ ತಂಡವನ್ನು ಕರೆಯಲಾಗಿತ್ತು. ಈ ಸಂಸ್ಥೆಯು ‘ಚಾರಿಟಿಗಾಗಿ ಇದನ್ನು ಮಾಡುತ್ತಿದ್ದೇವೆ ಎಂದು ಹೇಳದಿರಿ’ ಎಂದು ಹೇಳಿರುವುದನ್ನು ನಾವು ಒಪ್ಪಿಕೊಂಡಿದ್ದೆವು” ಎಂದು ಹೇಳಿದ್ದಾರೆ.

“ಇದು ಅನ್ಯಾಯವಾಗಿದೆ. ನನ್ನ ಪ್ರದರ್ಶನವು ಧರ್ಮಾತೀತವಾಗಿ ಭಾರತದ ಜನರಿಂದ ಪ್ರೀತಿ ಗಳಿಸಿದೆ. ಇದು ಅನ್ಯಾಯವಾಗಿದೆ. ಪ್ರದರ್ಶನದಲ್ಲಿ ಏನೂ ತೊಂದರೆಯಿಲ್ಲ ಎಂದು ನಾವು ಪ್ರದರ್ಶನದ ಸೆನ್ಸಾರ್ ಪ್ರಮಾಣಪತ್ರವನ್ನು ಹೊಂದಿದ್ದೇವೆ. ಬೆದರಿಕೆಗಳ ಕಾರಣ ಕಳೆದ 2 ತಿಂಗಳುಗಳಲ್ಲಿ 12 ಶೋಗಳನ್ನು ಬಿಟ್ಟುಬಿಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ನನಗನಿಸುತ್ತದೆ ಇದು ಇಲ್ಲಿ ಮುಗಿಯಿತು ಎಂದು. ನನ್ನ ಹೆಸರು ಮುನಾವರ್ ಫಾರೂಖಿ ಮತ್ತು ಇದು ನನ್ನ ಸಮಯ. ಜನರೇ ನೀವುಗಳು ಅದ್ಭುತ ಪ್ರೇಕ್ಷಕರಾಗಿದ್ದೀರಿ. ನಾನು ಇದನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ, ವಿದಾಯ” ಎಂದು ಅವರು ಬೇಸರ ವ್ಯಕ್ತಪಡಿಸಿ ಬರೆದಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿ

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಜನವರಿ 2 ರಂದು ಬಂಧನಕ್ಕೊಳಗಾಗಿದ್ದ ಹಾಸ್ಯ ಕಲಾವಿದ ಮುನಾವರ್‌ ಫಾರೂಖಿ ಅವರು ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

“ಮುನಾವರ್‌ ಫಾರೂಖಿ ಅವರು ಹಿಂದೂ ದೇವತೆಗಳನ್ನಾಲಿ ಅಥವಾ ಗೃಹ ಸಚಿವ ಅಮಿತ್ ಶಾ ಅವರನ್ನಾಲಿ ಅವಮಾನಿಸಿದ ಯಾವುದೇ ಪುರಾವೆಗಳಿಲ್ಲ” ಎಂದು ತುಕಾಗಂಜ್ ಠಾಣೆಯ ಇನ್ಸ್‌ಪೆಕ್ಟರ್‌ ಕಮಲೇಶ ಶರ್ಮಾ ಅವರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿತ್ತು. ಇದರ ನಂತರ ಬಂಧನದ ಸುಮಾರು ಒಂದು ತಿಂಗಳ ನಂತರ ಜೈಲಿನಿಂದ ಬಿಡುಗಡೆ ಹೊಂದಿದ್ದರು. ಅದಾಗಿಯೂ ಹಲವು ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಅಕ್ಟೋಬರ್‌ ಕೊನೆಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶದಲ್ಲಿ ಇಲ್ಲಿನ ಮೂಲನಿವಾಸಿಗಳ ಮೇಲಿನ ದೌರ್ಜನ್ಯ ಇಂದು ನಿನ್ನೆಯದಲ್ಲ ಇದು ಹರಪ್ಪದ ಶ್ರೀಮಂತ ಸಂಸ್ಕೃತಿಯ ಮೇಲಿನ ದಾಳಿಯೋಂದಿಗೆ ಆದಿಯಾಗಿ ಬೌದ್ಧ ಧರ್ಮ , ಬಸವ ಧರ್ಮ ಹಾಗೂ ಇಂದಿಗೂ ಬಹುಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿಯೇ ಬಹುಜನರನ್ನು ಸಾವಿರಾರು ವರ್ಷಗಳ ಕಾಲ ಶಿಕ್ಷಣ ಆದಿಯಾಗಿ ಎಲ್ಲಾ ಹಕ್ಕು ಅವಕಾಶಗಳಿಂದ ವಮಚಿಸಿದ್ದು, ಈಗಲೂ ಅದೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಮ್ಮ ಈ ಮುಗ್ಧ ಜನರಿಗೆ ಅರ್ಥ ವಾಗದಿರುವುದೆ ದುರಂತ.

  2. Is it really for puneeth sir charity or… Doubt it… Puneeth sir never defamed this coutry reputation… Instead he silently did society reforms….. Not like this on stage

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....