Homeಕರ್ನಾಟಕಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ಅನಿಸಿತು ಎಂದು ಹೇಳಿದ್ದಾರೆ ಎಂದು ನ್ಯೂಸ್‌ ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು

- Advertisement -
- Advertisement -

ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್‌ ಫೋನ್‌ಗಳನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿಲಾಗಿದ್ದು, ಅಂತಹ ಯಾವುದೇ ಘಟನೆಗಳು ಕಂಡು ಬಂದರೆ ದೂರು ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನ ಪೊಲೀಸರು ವಿಚಾರಣೆ ನಡೆಸುವ ನೆಪದಲ್ಲಿ ಜನರ ಮೊಬೈಲ್‌ಗಳನ್ನು ಪರಿಶೀಲಿಸಿ ಖಾಸಗಿತನಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಖ್ಯಾತ ಸುದ್ದಿ ವೈಬ್‌‌ಸೈಟ್ ನ್ಯೂಸ್‌‌ಲಾಂಡ್ರಿ ಇತ್ತೀಚೆಗೆ ವರದಿ ಮಾಡಿತ್ತು. ಈ ವರದಿಯ ನಂತರ ಆಯುಕ್ತರು ತಮ್ಮ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯೂಸ್ ಲಾಂಡ್ರಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಜನರ ಮೊಬೈಲ್ ಕಿತ್ತುಕೊಂಡು ವಿಚಾರಣೆ ನೆಪದಲ್ಲಿ ಅವರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿರುವ ಹಲವಾರು ಘಟನೆಗಳ ಬಗ್ಗೆ ವರದಿ ಮಾಡಿತ್ತು. ಇದರಲ್ಲಿ ಹಲವಾರು ಸಂತ್ರಸ್ತ ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಈ ವರದಿಯ ನಂತರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರು, “ಯಾವುದೇ ಪೊಲೀಸರು ಯಾವುದೇ ನೆಪದಲ್ಲಿ ಯಾವುದೇ ನಾಗರಿಕರ ಮೊಬೈಲ್ ಫೋನ್ ಅನ್ನು ಪರಿಶೀಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ಯಾವುದೇ ಘಟನೆ ಕಂಡುಬಂದಲ್ಲಿ, ದಯವಿಟ್ಟು 112 ಗೆ ಅಥವಾ 080-22942215 ಗೆ ಕರೆ ಮಾಡಿ ಪೊಲೀಸ್ ಆಯುಕ್ತರಿಗೆ ತಿಳಿಸಿ” ಎಂದು ಹೇಳಿದ್ದಾರೆ.

ದೂರು ನೀಡಿದ ವ್ಯಕ್ತಿಗಳ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹೇಳಿರುವ ಕಮಲ್ ಪಂತ್‌, ಕೃತ್ಯ ನಡೆಯುವ ಸ್ಥಳ ಮತ್ತು ಸಮಯವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಮೆಸೇಜ್ ಮಾಡಬಹುದು ಎಂದು ಹೇಳಿದ್ದಾರೆ.

ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ, ಪೊಲೀಸರು ಡ್ರಗ್ಸ್‌ ಹೆಸರಿನಲ್ಲಿ ಬೆದರಿಸಿ ಲಂಚಕ್ಕಾಗಿ ಬೇಡಿಕೆ ಇಡುವುದು, ಜನರ ಮೊಬೈಲ್ ಕಿತ್ತುಕೊಂಡು ಅವರ ಫೋಟೊಗಳನ್ನು ಚೆಕ್‌ ಮಾಡುವುದು, ವಾಟ್ಸಪ್‌ ಅನ್ನು ಪರಿಶೀಲಿಸಿ ತನ್ನ ಗೆಳತಿಯೊಂದಿಗೆ ಜಾ‌ಸ್ತಿ ಹೊತ್ತು ಚಾಟ್‌ ಮಾಡದಿರು ಎಂದು ಪುಕ್ಕಟೆ ಸಲಹೆ ನೀಡುವುದು, ರಾತ್ರಿ ಹೊತ್ತು ಸುಖಾ ಸುಮ್ಮನೆ ಬೆದರಿಸಿ ಹಣ ಕಿತ್ತುಕೊಳ್ಳುವುದು ಸೇರಿದಂತೆ ಹಲವು ಕುಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಜನರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಿತ್ತು.

ಸಂತ್ರಸ್ತರೊಬ್ಬರು ಬೆಂಗಳೂರು ಪೊಲೀಸರನ್ನು ಉಲ್ಲೇಖಿಸಿ, “ನಾನು ಡಕಾಯಿತರ ಗುಂಪಿನಿಂದ ದರೋಡೆಗೆ ಒಳಗಾಗುತ್ತಿರುವಂತೆ ನನಗೆ ಅನಿಸಿತು” ಎಂದು ಆತಂಕ ವ್ಯಕ್ತಪಡಿಸಿದ್ದಾಗಿ ನ್ಯೂಸ್ ಲಾಂಡ್ರಿ ತನ್ನ ವರದಿಯಲ್ಲಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....