Homeಮುಖಪುಟದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

- Advertisement -
- Advertisement -

ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಗಲಭೆ ಸೇರಿದಂತೆ, ಪ್ರಸ್ತುತ ರೈತರ ಆಂದೋಲನ ಮತ್ತು ಕೊರೊನಾ ಸಾಂಕ್ರಾಮಿಕವನ್ನು ಉತ್ತಮವಾಗಿ ನಿಭಾಯಿಸಿ ದೆಹಲಿ ಪೊಲೀಸರು ಸಾಧನೆ ಮಾಡಿದ್ದಾರೆ ಮತ್ತು ಈ ಪರೀಕ್ಷೆಗಳಲ್ಲಿ ಅವರು ಉತ್ತೀರ್ಣರಾಗಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಶ್ಲಾಘಿಸಿದ್ದಾರೆ.

ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅಮಿತ್ ಶಾ, “ನಾನು ಫೆಬ್ರವರಿ 2020 ರಲ್ಲಿ ಇಲ್ಲಿಗೆ ಬಂದಿದ್ದೆ. ಆ ಸಮಯದಲ್ಲಿ ಪೊಲೀಸರು ಯಾವಾಗಲೂ ಸಾರ್ವಜನಿಕರೊಂದಿಗೆ ಇದ್ದಾರೆ ಎಂದು ನಾನು ಹೇಳಿದ್ದೆ. ಇಂದು ಒಂದು ವರ್ಷವಾಗಿದೆ. ಹಿಂತಿರುಗಿ ನೋಡಿದರೆ ಸಾಂಕ್ರಾಮಿಕ ಸಮಯದಲ್ಲಿ ಪೊಲೀಸರು ಸಾರ್ವಜನಿಕ ನಂಬಿಕೆಯನ್ನು ಹೇಗೆ ಗೆದ್ದರು ಎಂದು ಕಾಣುತ್ತದೆ” ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇದನ್ನೂ ಓದಿ: ಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

“2020 ರಲ್ಲಿ ದೆಹಲಿ ಮತ್ತು ದೇಶ ಅನೇಕ ಸವಾಲುಗಳು ಎದುರಿಸಿದ್ದವು. ಈಶಾನ್ಯ ದೆಹಲಿ ಗಲಭೆಗಳು, ಲಾಕ್‌ಡೌನ್ ಮತ್ತು ಅನ್-ಲಾಕ್‌ ಪ್ರಕ್ರಿಯೆ, ವಲಸಿಗರು ಮನೆಗೆ ತಲುಪಲು ಸಹಾಯ ಮಾಡುವುದು ಮತ್ತು ರೈತರ ಆಂದೋಲನವನ್ನು ಶಾಂತಿಯುತವಾಗಿ ನಿರ್ವಹಿಸುವುದು ಸೇರಿದಂತೆ. ಈ ವರ್ಷದ ಎಲ್ಲಾ ಪರೀಕ್ಷೆಗಳಲ್ಲಿ ಪೊಲೀಸರು ಉತ್ತಮ ಸಾಧನೆ ಮಾಡಿದ್ದಾರೆ ಹಾಗೂ ಉತ್ತೀರ್ಣರಾಗಿದ್ದಾರೆ” ಎಂದು ಅವರು ಶ್ಲಾಘಿಸಿದ್ದಾರೆ.

ದೆಹಲಿ ಗಲಭೆ: ಪೊಲೀಸ್ ಮತ್ತು ವಿಶೇಶ ಅಪರಾದ ದಳದ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಭಾರತದಾದ್ಯಂತ ಗಣ್ಯರ ಪತ್ರ
ದೆಹಲಿ ಗಲಭೆಯ ನಂತರ (PC: AFP)

ಅಮಿತ್‌ ಶಾ, ಕೆಲವು ಪೊಲೀಸ್ ಸಿಬ್ಬಂದಿಯನ್ನು ಅವರ ಕಾರ್ಯಕ್ಷಮತೆಗಾಗಿ ಗೌರವಿಸಿದರು ಮತ್ತು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದರು. ಗಣರಾಜ್ಯೋತ್ಸವದ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನೂ ಅವರು ವಹಿಸಿದ್ದರು.

“ಸವಾಲುಗಳನ್ನು ನಿಭಾಯಿಸುವ ಮೊದಲು ಅವುಗಳನ್ನು ಅರ್ಥಮಾಡಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆಗಳನ್ನು ತರಬೇಕಾಗುತ್ತದೆ. ಆಗ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

2022 ರ ವೇಳೆಗೆ ದೇಶವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಸುಧಾರಣೆ ಮತ್ತು ಉತ್ತಮ ಕಾರ್ಯಕ್ಷಮತೆಗಾಗಿ ಐದು ಗುರಿಗಳನ್ನು ನಿಗದಿಪಡಿಸುವಂತೆ ಪ್ರತಿ ಪೊಲೀಸ್ ಠಾಣೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...