Homeಮುಖಪುಟಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ!

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

- Advertisement -
- Advertisement -

ಒಳಮೀಸಲಾತಿ ಪರ-ವಿರೋಧದ ಚರ್ಚೆಯ ಹಿನ್ನಲೆಯಲ್ಲಿ ಕನ್ನಡದ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿಯವರ ಸಂದರ್ಶನ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿಯ ಮೂಲ ಉದ್ದೇಶವೇ ಶತಮಾನಗಳಿಂದ ತುಳಿತಕ್ಕೊಳಗಾದ ವಂಚಿತರ ಸಬಲೀಕರಣ. ಸಹಸ್ರಾರು ಜಾತಿಗಳಿರುವ ಹಿಂದೂ ಧರ್ಮದಲ್ಲಿ ಪ್ರಬಲ ಮತ್ತು ದುರ್ಬಲ ಜಾತಿಗಳೆಂದು ಎರಡು ಭಾಗ ಮಾಡಿದರೆ ದುರ್ಬಲರೇ ಶೇ. 85 ಕ್ಕೂ ಮಿಗಿಲಾಗಿದ್ದಾರೆ. ಈಗ ನೀಡಲಾಗಿರುವ ಶೇ. 50 ರಷ್ಟು ಮೀಸಲಾತಿಯನ್ನು ಶೇ. 85 ಜನರ ನಡುವೆ ಗುಂಪುಗಳಾಗಿ ವಿಂಗಡನೆಮಾಡಿ ಹಂಚಲಾಗಿದೆ. ಈ ದುರ್ಬಲ ಜಾತಿಗಳ ಒಂದೊಂದು ಗುಂಪಿನಲ್ಲಿಯೂ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಜಾತಿಗಳಿವೆ. ಸಹಜವಾಗಿಯೆ ಅಲ್ಲಿಯೂ ಅಲ್ಪಸಂಖ್ಯಾತ ಜಾತಿಗಳು ವಂಚನೆಗೊಳಗಾಗುವ ಸಾಧ್ಯತೆಯೆ ಹೆಚ್ಚು. ಕೆಳಜಾತಿಗಳೆಂದ ಮಾತ್ರಕ್ಕೆ ಅವುಗಳೇನೂ ಒಳಗೊಳ್ಳುವ ಏಕರೂಪಿ ಜಾತಿಗಳಲ್ಲ. ಒಬ್ಬರ ಮನೆಯಲ್ಲಿ ಇನ್ನೊಬ್ಬರು ನೀರು ಕುಡಿಯುವುದಿಲ್ಲ ಮತ್ತು ಮುಟ್ಟಿಸಿಕೊಳ್ಳುವುದೂ ಇಲ್ಲ. ಒಡೆದು ಛಿದ್ರಗೊಳಿಸುವುದು ಮತ್ತು ದೂರಮಾಡುವುದು ಜಾತಿಪದ್ಧತಿಯ ಲಕ್ಷಣ. ಇದು ಮಾನವೀಯತೆಗೆ ಎಸಗಿದ ಪೈಶಾಚಿಕ ದೌರ್ಜನ್ಯ. ಆದ್ದರಿಂದ ಎಲ್ಲೆಲ್ಲಿ ಒಳಮೀಸಲಾತಿ ಅಗತ್ಯವೋ ಅಲ್ಲಿ ಕೊಡಬೇಕೆಂಬುದು ನನ್ನ ನಿಲುವು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಮೇಲಿನ ವಿವರಣೆಯಿಂದ ತಾತ್ವಿಕವಾಗಿ ಮೀಸಲಾತಿ, ಒಳಮೀಸಲಾತಿ ಎರಡೂ ಒಂದೇ ಆಶಯವುಳ್ಳವು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಇಲ್ಲಿ ಹೋರಾಟ ಮಾಡಬೇಕಾಗಿರುವವರು ಯಾರು? ಇದು ಶ್ರೀಮಂತನು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದಂತೆ. ರಾಜಕೀಯ ಅಧಿಕಾರ ಮತ್ತು ಆರ್ಥಿಕ ಪ್ರಾಬಲ್ಯ ಮೇಲ್ಜಾತಿಯ ಬಳಿ ಇದೆ. ಸಾಲದ್ದಕ್ಕೆ ಪ್ರಜಾಪ್ರಭುತ್ವದ ಬಾಯಿ ಎನಿಸಿಕೊಂಡಿರುವ ಮಾಧ್ಯಮವೂ ಅವರ ಹಿಡಿತದಲ್ಲಿಯೇ ಇದೆ. ಹೀಗಿರುವಾಗ ಸಂವಿಧಾನಾತ್ಮಕವಾಗಿ ನಿಮ್ಮ ಪಾಲನ್ನು ನಿಮಗೆ ಕೊಟ್ಟಿದ್ದೇವೆ ಎಂದು ಹೇಳಿ ಬಹುಸಂಖ್ಯಾತ ಕೆಳಜಾತಿ ಜನರನ್ನು ಸುಮ್ಮನಿರಿಸುವುದು ಸುಲಭ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಸ್ಪೃಶ್ಯ ದಲಿತರ ಬಗ್ಗೆ ನನಗೆ ಅನುಕಂಪವಿದೆ. ಅವರಲ್ಲೂ ಕಡುಬಡವರಿದ್ದಾರೆ. ಆದರೆ ಅವರಲ್ಲಿ ಬಹುಸಂಖ್ಯಾತ ಜಾತಿಗಳನ್ನು ಅಸ್ಪೃಶ್ಯ ಜಾತಿಗಳೊಂದಿಗೆ ಸೇರಿಸಿರುವುದು ರಾಜಕೀಯ ಷಡ್ಯಂತ್ರ ಎಂದು ಈಗ ಅನಿಸುತ್ತಿದೆ. ಭಾರತದ ಯಾವ ರಾಜ್ಯದಲ್ಲೂ ಸ್ಪೃಶ್ಯರು ಅನುಸೂಚಿತ ಜಾತಿ ಪಟ್ಟಿಯಲ್ಲಿಲ್ಲ. ಯಾಕೆಂದರೆ ಅಸ್ಪೃಶ್ಯನ ಪಾರಂಪರಿಕ ಯಾತನೆ ಇತರ ಶೋಷಿತರಿಗಿಂತ ಭಿನ್ನ. ಮನುಷ್ಯಮಾತ್ರನಾದವನು ಅನುಭವಿಸಲಾರದ ಕ್ರೌರ್ಯ, ಹಿಂಸೆ ಮತ್ತು ಅವಮಾನಗಳಿಗೆ ಒಳಗಾದವನು ಅವನು. ಬಹುಪಕ್ಷೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಅಂಬೇಡ್ಕರರ ನಿರ್ವಚನವೇನೋ ಸರಿ. ಆದರೆ ಜಾತಿವ್ಯವಸ್ಥೆಯಲ್ಲಿ ಬಲಾಢ್ಯ ಜಾತಿಗಳೇ ಚುನಾವಣೆಯಲ್ಲಿ ಮೇಲುಗೈ ಪಡೆಯುವುದರಿಂದ ಮತ್ತೆ ಶೋಷಿತರು ಅವಕಾಶವಂಚಿತರಾಗುವುದನ್ನು ತಪ್ಪಿಸಲು ಅಸ್ಪೃಶ್ಯರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಕಲ್ಪಿಸಿದ್ದರು. ಅದನ್ನು ಗಾಂಧಿ ಇಲ್ಲವಾಗಿಸಿದರು. ಆದ್ದರಿಂದ ಇಂದು ದಲಿತನ ಓಟಿಗೆ ಒಂದು ಮೌಲ್ಯ ಇದೆ ಮತ್ತು ಇಲ್ಲ. ದಲಿತನ ಮತಕ್ಕಿರುವುದು ಅವಲಂಬಿತ ಮೌಲ್ಯ [Dependent value]. ಇದಕ್ಕೆ ಬಹಳ ದೊಡ್ಡ ಉದಾಹರಣೆ ಎಂದರೆ ಕಳೆದ ಚುನಾವಣೆಯಲ್ಲಿ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸೋಲು. ಮೇಲ್ಜಾತಿಯವರು ಜಿದ್ದಿನಿಂದ ಅವರೆದುರು ಒಬ್ಬ ಅನಾಮಿಕ ಸ್ಪೃಶ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಸೋಲಿಸಿದರು. ಹಿಂದೂ ಮನಸ್ಥಿತಿ ಹೇಗಿದೆಯೆಂದರೆ ಸ್ಪೃಶ್ಯ ಮತ್ತು ಅಸ್ಪೃಶ್ಯರ ನಡುವೆ ಆಯ್ಕೆಯ ವಿಷಯ ಬಂದಾಗ ಅವನು ಸ್ಪೃಶ್ಯನನ್ನೆ ಆಯ್ಕೆ ಮಾಡುತ್ತಾನೆ. ಆದ್ದರಿಂದ ಮೇಲ್ಜಾತಿ ಜನರ ಕರುಣೆಯಿಲ್ಲದೆ ಯಾವ ಘಟಾನುಘಟಿ ಅಸ್ಪೃಶ್ಯ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಎರಡೂ ಬಣಗಳಲ್ಲೂ ಇದ್ದಾರೆ. ಈಗ ಇಬ್ಬರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ ಎನಿಸುತ್ತದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದಕ್ಕೆ ನನ್ನ ಸಹಮತವಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ. ಮೇಲೆ ಹೇಳಿದ ಕಾರಣಗಳಿಂದ ಒಳಮೀಸಲಾತಿ ಜಾರಿಯಾಗುವುದು ಒಳಿತು.

  • ಡಾ. ಮೂಡ್ನಾಕೂಡು ಚಿನ್ನಸ್ವಾಮಿ

(ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.)


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...