Homeಕರ್ನಾಟಕಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

ಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

- Advertisement -
- Advertisement -

ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಕಾರ್ಮಿಕರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿದೆ ಬೀದಿಬದಿ ವ್ಯಾಪಾರಿಗಳು, ಹಮಾಲಿ ಕಾರ್ಮಿಕರು, ಬೀಡಿಕಾರ್ಮಿಕರು, ಟೈಲರ್‌ಗಳು ಮತ್ತು ಮನೆಗೆಲಸಗಾರರಿಗೆ ಯಾವುದೇ ಪರಿಹಾರದ ಕ್ರಮಗಳನ್ನು ಕೈಗೊಳ್ಳದಿರುವುದು ಈ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವರ್ಗವನ್ನೂ ಪರಿಹಾರ ಕ್ರಮಗಳಡಿ ತರಬೇಕಿತ್ತು ಎಂಬ ಒತ್ತಾಯ ವ್ಯಕ್ತವಾಗಿದೆ.

ಕೋವಿಡ್-19 ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಕಾರ್ಮಿಕ ವರ್ಗ ಜರ್ಝರಿತವಾಗಿತ್ತು. ದಿನದ ದುಡಿಮೆಯೇ ಅವರ ಜೀವನಾಧಾರವಾಗಿತ್ತು. ಅಂಥವರ ಬದುಕು ಸಂಕಷ್ಟಕ್ಕೆ ಸಿಲುಕೊಂಡಿದ್ದು ಅವರ ನೆರವಿಗೂ ಸರ್ಕಾರ ಮುಂದಾಗಬೇಕು. ಕೇವಲ ಆಹಾರ ಕಿಟ್ ಗಳನ್ನು ನೀಡಿದರೆ ಸಾಲದು ದಿನನಿತ್ಯದ ಖರ್ಚುವೆಚ್ಚಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರದಿಂದ ನೀರಿಕ್ಷಿಸಿದ್ದರು. ಹಲವು ಮನವಿಗಳನ್ನು ನೀಡಿದ್ದರು. ಆದರೂ ಸರ್ಕಾರ ಪರಿಹಾರದ ನಿರೀಕ್ಷೆ ಹುಸಿಯಾಗಿದೆ.

ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಖ್ಯೆ 20 ಲಕ್ಷ ಇದೆ. ಹಮಾಲಿ ಕಾರ್ಮಿಕರು ಮತ್ತು ಮನೆಗೆಲಸಗಾರರು ತಲಾ 5ಲಕ್ಷ ಇದ್ದಾರೆ. ಟೈಲರ್ ಗಳ ಸಂಖ್ಯೆ 4 ಲಕ್ಷ ಮಂದಿ ಇದ್ದು ಬೀಡಿ ಕಾರ್ಮಿಕರು, ಕೃಷಿಕೂಲಿಕಾರರು ಹೀಗೆ ರಾಜ್ಯದಲ್ಲಿ 2.5 ಕೋಟಿ ಅಸಂಘಟಿತ ಕಾರ್ಮಿಕರಿದ್ದರೂ ಅವರ ಅಂಕಿಸಂಖ್ಯೆ ಸರ್ಕಾರದ ಬಳಿ ಇಲ್ಲ. ಇಂಥ
ಸಂಧರ್ಭದಲ್ಲಿ ಸರ್ಕಾರ ಇವರನ್ನು ನಿರ್ಲಕ್ಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕಾರ್ಮಿಕರ ಮುಖಂಡ ಮಹಾಂತೇಶ್ ಹೇಳುತ್ತಾರೆ.

ಕೊರೊನಾ ಸಂಕಟ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಕೊಡಿಸುವ ಕುರಿತು ಸಭೆಗಳು ಬೆಂಗಳೂರಿನಲ್ಲಿ ನಡೆದಿದೆ. ನಾಳೆ (ಮೇ07) ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪರಿಹಾರ ನೀಡುವ ಬಗ್ಗೆ ಗಮನ ಸೆಳೆಯಲಿದ್ದರು. ಸಿದ್ದರಾಮಯ್ಯ ಭೇಟಿಯಾಗುವ ಮುನ್ನಾದಿನವೇ ಟ್ಯಾಕ್ಸಿ, ನೇಕಾರರು, ಆಟೋ, ಕಟ್ಟಡ, ಮಡಿವಾಳ ಮತ್ತು ಕ್ಷೌರಿಕರಿಗೆ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜಕೀಯ ಲಾಭ ಧಕ್ಕದಿರಲಿ ಎಂಬ ಉದ್ದೇಶ ಇದರಲ್ಲಿ ಅಡಗಿದೆ.

ವಲಸೆ ಕಾರ್ಮಿಕರನ್ನು ಅವರ ಊರಿಗೆ ತಲುಪಿಸುವ ವಿಚಾರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ಕೋಟಿ ಘೋಷಿಸದಿದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿರಲಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಕಾರ್ಮಿಕ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಮೊದಲು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸ್ವಉದ್ಯೋಗ ಮಾಡುತ್ತಿದ್ದಾರೆ, ಅವರಿಗೆ ಪರಿಹಾರ ನೀಡಲು ಆಗುವುದಿಲ್ಲವೆಂದು ಯಡಿಯೂರಪ್ಪ ಹೇಳಿದ್ದರು ಎನ್ನಲಾಗಿದೆ. ನಂತರ ಓಲಾ ಮತ್ತು ಊಬರ್ ಮಾಲಿಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರಿಗೂ ಕೋವಿಡ್ ಸಂಕಷ್ಟದ ಪರಿಹಾರ ಘೋಷಣೆ ಮಾಡಿದೆ.

ಹೂವಿನ ಬೆಳೆಗಾರರು, ಆಟೋ, ಕ್ಷೌರಿಕರು, ಮಡಿವಾಳರಿಗೆ ಸಣ್ಣ ಪ್ರಮಾಣದ ಪರಿಹಾರ ನೀಡುತ್ತಿರುವುದು ಶ್ಲಾಘನೀಯ. ಇವರಂತೆಯೇ ಕಷ್ಟದ ಜೀವನ ನಡೆಸುತ್ತಿರುವ ಬೀಡಿ, ಟೈಲರ್, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಹಮಾಲಿ ಕಾರ್ಮಿಕರನ್ನು ಒಳಗೊಂಡಂತೆ ಪರಿಹಾರ ಘೋಷಣೆ ಮಾಡಿದ್ದರೆ ಒಳ್ಳೆಯದಿತ್ತು ಎಂದು ಕಾರ್ಮಿಕ ಮುಖಂಡರ ಆಗ್ರಹ.

ಈ ವರ್ಗದಲ್ಲಿ ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನೊಗ ಹೊತ್ತವರು ಹೆಚ್ಚಾಗಿದ್ದು ಸರ್ಕಾರ ಇವರ ನೆರವಿಗೂ ಬರಬೇಕಾಗಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...