Homeಕರ್ನಾಟಕಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

- Advertisement -
- Advertisement -

ರಾಜ್ಯದ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡಲು ಸಂವಿಧಾನಕ್ಕೆ ತಿದ್ದುಪಡಿ‌‌ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು‌ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ‌ ಹಿಂದುಳಿದ ಜಾತಿಗಳನ್ನು ರಾಷ್ಟ್ರೀಯ ಹಿಂದುಳಿದ ಜಾತಿಗಳ ಆಯೋಗದ ಶಿಫಾರಸಿನಂತೆ‌ ಗುರುತಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುವ ಸಂವಿಧಾನದ ತಿದ್ದುಪಡಿಯನ್ನು ‌ಪ್ರಾರಂಭದಿಂದಲೇ ನಾವು ವಿರೋಧಿಸುತ್ತಾ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

ರಾಷ್ಟ್ರೀಯ ಹಿಂದುಳಿದ ವರ್ಗಗಳ‌ ಆಯೋಗಕ್ಕೆ‌ ಸಾಂವಿಧಾನಿಕ‌ ಸ್ಥಾನಮಾನ ನೀಡುವ ನೆಪದಲ್ಲಿ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದ್ದನ್ನು ಕೇಂದ್ರ ಸರ್ಕಾರ ಈಗಲಾದರೂ ಒಪ್ಪಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವ‌ನ್ನು ರಾಜ್ಯಕ್ಕೆ ನೀಡಲು ಅಗತ್ಯವಾಗಿರುವ ಸಂವಿಧಾನದ 102ನೇ ತಿದ್ದುಪಡಿಗೆ‌ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಆರು ತಿಂಗಳಲ್ಲಿ ಮೂರು ಮುಖ್ಯಮಂತ್ರಿ; ಪುಷ್ಕರ್‌ ಸಿಂಗ್ ಧಾಮಿ ಮುಂದಿನ ಸಿಎಂ!

ಇದನ್ನೂ ಓದಿ: 2024ರಲ್ಲಿ ಮೋದಿ ಸೋಲಿಸಲು AAP, TMC ಜೊತೆ ಮೈತ್ರಿ: ಸಂದರ್ಶನದಲ್ಲಿ ಅಖಿಲ್‌ ಗೊಗೊಯ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...