ಕೊರೊನಾ ಆರ್ಥಿಕ ಹಿಂಜರಿತ: 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ | NaanuGauri
PC: moneycontrol.com

ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಹೇಳಿದ್ದಾರೆ.

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದು ಕೇರಳದಾದ್ಯಂತ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಕರಣಗಳ ತನಿಖೆಗಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಹರ್ಷಿತಾ ಅಟ್ಟಲೂರಿ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಹಿನ್ನಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್‌, “ನ್ಯಾಯಯುತ ಸಮಾಜವೆಂದರೆ ಅದು ಮಹಿಳೆಯರು ಮತ್ತು ಪುರುಷರನ್ನು ಸಮಾನವಾಗಿ ಪರಿಗಣಿಸುತ್ತದೆ. ಕೌಟುಂಬಿಕ ದೌರ್ಜನ್ಯದ ಇತ್ತೀಚಿನ ಭಯಾನಕ ಘಟನೆಗಳ ಹಿನ್ನಲೆಯಲ್ಲಿ, ನ್ಯಾಯಯುತ ಸಮಾಜವನ್ನು ಕಟ್ಟಲು ಕೇರಳವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಅನ್ಯಾಯವನ್ನು ಕೊನೆಗೊಳಿಸಲು ಸರ್ಕಾರ ಮತ್ತು ಜನರು ಒಟ್ಟಾಗಿ ನಿಲ್ಲುತ್ತಾರೆ” ಎಂದು ಹೇಳಿದ್ದಾರೆ.

“ಮಹಿಳೆಯರು ಕೀಳಲ್ಲ, ಅವರಿಗೆ ಸಮಾನ ಹಕ್ಕುಗಳಿವೆ ಎಂಬ ಸತ್ಯವನ್ನು ಪುರುಷರು ಒಪ್ಪಿಕೊಳ್ಳಬೇಕು. ಯುವ ಸಂಘಟನೆಗಳು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕಾಗಿದೆ. ಅಂತಹ ಪ್ರಗತಿಪರ ವರ್ತನೆಗಳನ್ನು ತಮ್ಮ ಮಕ್ಕಳಲ್ಲಿ ಬೆಳೆಸಲು ಪೋಷಕರು ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡಬೇಕು. ನಾವು ಹೊಸ ಸಂಸ್ಕೃತಿಯನ್ನು ಪೋಷಿಸಬೇಕು” ಎಂದು ಅವರು ಹೇಳಿದ್ದಾರೆ.

“ಸಮಾಜವು ಏನು ಯೋಚಿಸುತ್ತದೆ ಎಂದು ಹೆದರುವ ಬದಲು, ಕೌಟುಂಬಿಕ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಧ್ವನಿ ಎತ್ತಬೇಕಾಗಿದೆ. ಸರ್ಕಾರ ನಿಮ್ಮ ಪರವಾಗಿ ನಿಂತು ನಿಮ್ಮ ಹಕ್ಕುಗಳನ್ನು ರಕ್ಷಿಸುತ್ತದೆ. ನಾವು ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಬಲ ವ್ಯವಸ್ಥೆಗಳನ್ನು ಬಲಪಡಿಸುತ್ತೇವೆ. ಮಹಿಳೆಯರಿಗೆ ಸಹಾಯ ಒದಗಿಸಲು ನವೀನ ಕ್ರಮಗಳನ್ನು ಪರಿಚಯಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

“ಮಹಿಳೆಯರ ಮೇಲಿನ ದೌರ್ಜನ್ಯದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರತಿ ಜಿಲ್ಲೆಯಲ್ಲಿ ‘ಕೌಟುಂಬಿಕ ದೌರ್ಜನ್ಯ ಪರಿಹಾರ ಕೇಂದ್ರ’ವು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಸ್ವೀಕರಿಸಿದ ದೂರುಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಡಿಜಿಪಿಗೆ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ದಾರೆ.

ಮಹಿಳೆಯರ ಮೇಲಿನ ಸೈಬರ್ ಅಪರಾಧಗಳನ್ನು ಪರಿಹರಿಸುವ ಆನ್‌ಲೈನ್ ಸೇವೆಯಾದ ‘ಅಪರಾಜಿತಾ’ ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಕೌಟುಂಬಿಕ ದೌರ್ಜನ್ಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಇಂದಿನಿಂದ ಬಳಸಬಹುದು ಎಂದು ಪಿಣರಾಯಿ ಹೇಳಿದ್ದಾರೆ. ಅಲ್ಲದೆ [email protected] ಗೆ ಈ ಮೇಲ್ ಅಥವಾ 9497996992 ಗೆ ಕರೆ ಮಾಡಬಹುದು ಎಂದು ಕೂಡಾ ಅವರು ಹೇಳಿದ್ದಾರೆ.

ವರದಕ್ಷಿಣೆ ಬಗ್ಗೆ ದೂರುಗಳನ್ನು ತನಿಖೆ ಮಾಡಲು ಮತ್ತು ಪರಿಹರಿಸಲು ರಾಜ್ಯ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದಿರುವ ಮುಖ್ಯಮಂತ್ರಿ, “ಮಹಿಳಾ ಎಸ್‌ಐ ನೋಡಲ್ ಅಧಿಕಾರಿಗೆ ಸಹಾಯ ಮಾಡಲಿದ್ದಾರೆ. ದೂರುಗಳನ್ನು ದೂರವಾಣಿಯಲ್ಲಿ 9497999955 ಗೆ ಸಲ್ಲಿಸಬಹುದು. ಈ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸಲು ಎಲ್ಲರಿಗೂ ಸೂಚಿಸಿ. ಸಾಮಾಜಿಕ ಕಳಂಕವನ್ನು ನಿಗ್ರಹಿಸೋಣ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here