Homeಚಳವಳಿಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ

- Advertisement -
- Advertisement -

ಕೇಂದ್ರ ಸರ್ಕಾರದ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರು ಇತ್ತೀಚೆಗೆ ಪಂಜಾಬಿನಲ್ಲಿರುವ ಸಾವಿರಾರು ಜಿಯೋ ಟವರ್‌ಗಳಿಗೆ ಹಾನಿಯುಂಟುಮಾಡಿದ್ದರು. ಇದನ್ನು ಪರೋಕ್ಷವಾಗಿ ಖಂಡಿಸಿರುವ ಪ್ರಧಾನಿ ಮೋದಿ, “ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡುವುದು ಜನಸಾಮಾನ್ಯರ ಮೇಲೆ ದಾಳಿ ಮಾಡಿದಂತೆ” ಎಂದು ಹೇಳಿದ್ದಾರೆ.

“ಪ್ರತಿಭಟನೆಯ ಸಮಯದಲ್ಲಿ ಮೂಲಭೂತ ಸೌಕರ್ಯಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದು ಒಳ್ಳೆಯದಲ್ಲ. ಈ ಮೂಲಭೂತ ಸೌಕರ್ಯಗಳು ಯಾವುದೇ ನಾಯಕ ಅಥವಾ ಪಕ್ಷ ಅಥವಾ ಸರ್ಕಾರದ್ದಲ್ಲ ಎನ್ನುವುದನ್ನು ಅವರು ನೆನಪಿನಲ್ಲಿಡಬೇಕು. ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಖಲೀಸ್ತಾನಿಗಳಲ್ಲ, ನಮ್ಮ ಅನ್ನದಾತರು: ವಿಷಾದ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

“ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವಾಗ ಜನರು ತಮ್ಮ ರಾಷ್ಟ್ರೀಯ ಕರ್ತವ್ಯಗಳನ್ನು ಮರೆಯಬಾರದು” ಎಂದು ಮೋದಿ ಹೇಳಿದರು.

‘ರೈಲ್‌ ರೊಕೊ’ ಹೋರಾಟದಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಗಳನ್ನು ಸ್ವಾಧೀನಪಡಿಸಿಕೊಂಡಿದ್ದರು. ಇದನ್ನು ಉಲ್ಲೇಖಿಸಿದ ಪ್ರಧಾನಿ, “ಪ್ರತಿಭಟನಾಕಾರರು ರೈಲುಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು…

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ನಡುವೆಯೇ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸಲು ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಲಪಂಥೀಯ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್‌ಗಳು ಪ್ರಯತ್ನಿಸುತ್ತಿವೆ. ಇದರ ಭಾಗವಾಗಿ ರೈತರನ್ನು ನಕ್ಸಲರು, ಖಲೀಸ್ತಾನಿಗಳು, ಭಯೋತ್ಪಾದಕರು, ನಕಲಿ ರೈತರು ಎಂದು ಮುಂತಾದ ಅಸಾಂವಿಧಾನಿಕ ಪದಗಳನ್ನು ಪ್ರಯೋಗಿಸಿ ಜನರಲ್ಲಿ ನಕಾರಾತ್ಮಕ ಭಾವನೆಯನ್ನು ಹರಡುತ್ತಿದೆ. ಆದರೆ ಇದಾವುದಕ್ಕೂ ಅಂಜದ ರೈತರು ತಮ್ಮ ದಿಟ್ಟ ಹೋರಾಟವನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...