Homeಮುಖಪುಟಭಾರತದ ಭೇಟಿ ರದ್ದುಗೊಳಿಸಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಬ್ರಿಟನ್ ಪ್ರಧಾನಿ!

ಭಾರತದ ಭೇಟಿ ರದ್ದುಗೊಳಿಸಿದ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಬ್ರಿಟನ್ ಪ್ರಧಾನಿ!

- Advertisement -
- Advertisement -

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬರಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೊರೊನಾ ಕಾರಣದಿಂದ ತಮ್ಮ ಭಾರತದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತದಲ್ಲಿನ ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ ಎಂದು ದೆಹಲಿಯ ಗಡಿಗಳಲ್ಲಿನ ಹೋರಾಟನಿರತ ರೈತ ಮುಖಂಡರು ಬ್ರಿಟನ್ ಸಂಸದರಿಗೆ ಪತ್ರ ಬರೆಯುವುದಾಗಿ ಈ ಹಿಂದೆ ತಿಳಿಸಿದ್ದರು.

ಜನವರಿ 26 ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್‌ ಬರಲಿದ್ದಾರೆ ಎಂದು ವರದಿಯಾದ ನಂತರ, “ಭಾರತ ಸರ್ಕಾರವು ರೈತರ ಹಕ್ಕೊತ್ತಾಯಗಳನ್ನು ಈಡೇರಿಸುವವರೆಗೂ ಇಂಗ್ಲೆಂಡ್‌ನ ಪ್ರಧಾನಿ ಭಾರತಕ್ಕೆ ಬರದಂತೆ ತಡೆಯಬೇಕೆಂದು ಅಲ್ಲಿನ ಸಂಸದರಿಗೆ ಪತ್ರ ಬರೆದು ಕೋರುತ್ತೇವೆ” ಎಂದು ಪಂಜಾಬ್‌ನ ರೈತ ಮುಖಂಡ ಕುಲವಂತ್‌ ಸಿಂಗ್ ಹೇಳಿದ್ದರು.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿ, “ಕಳೆದ ರಾತ್ರಿ ಘೋಷಿಸಿದ ರಾಷ್ಟ್ರೀಯ ಲಾಕ್‌ಡೌನ್ ಮತ್ತು ಕೊರೊನಾ ವೈರಸ್‌ನ ಹೊಸ ರೂಪಾಂತರವು ವೇಗವಾಗಿ ಹರಡುತ್ತಿರುವುದರಿಂದ ಪ್ರಧಾನ ಮಂತ್ರಿಯವರು ಬ್ರಿಟನ್‌ನಲ್ಲಿ ಉಳಿಯಬೇಕಾಗಿದೆ ಎಂದು ಬ್ರಿಟನ್ ಸರ್ಕಾರ ಹೇಳಿದೆ” ಎಂದು ವರದಿಯಾಗಿದೆ.

 


ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...