HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...