Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...