Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...