Homeಮುಖಪುಟಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ?

- Advertisement -
- Advertisement -

ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ? ಎಂದು ಪ್ರಶ್ನಿಸಿದ್ದಾರೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ನಾನು ಮುಖ್ಯಮಂತ್ರಿಯಾಗಿದ್ದಾಗ ಆದೇಶಿಸಿದ್ದೆ, ಈಗಲೂ ಅಧ್ಯಯನ ನಡೆಯುತ್ತಿದೆ, ಅದು ಮುಗಿದು ವರದಿ ಬಂದ ನಂತರ ಸರ್ಕಾರದ ಮೇಲೆ ಒತ್ತಾಡ ಹೇರಬೇಕು. ಈಗಲೇ ಸಮಾವೇಶ, ರ್ಯಾಲಿಗಳು ಅನಗತ್ಯ ಅನ್ನೋದು ನನ್ನ ಅನಿಸಿಕೆ ಎಂದು ತಿಳಿಸಿದ್ದಾರೆ.

5 ವರ್ಷ ಮುಖ್ಯಮಂತ್ರಿಯಾಗಿ ನಾಡಿನ ಶೋಷಿತ ಸಮುದಾಯಗಳಿಗಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ನನ್ನ ಕೆಲಸದ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಈಶ್ವರಪ್ಪ ಯಾರು? ಅವರು ಕೊಡೋ ಸರ್ಟಿಫಿಕೇಟ್ ಅಗತ್ಯ ನನಗಿಲ್ಲ. ತಮ್ಮ ಸರ್ಕಾರ ಏನು ಮಾಡಿದೆ ಎಂದು ಅವರು ಹೇಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿ(ಎಸ್) ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿ(ಎಸ್) ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.


ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...