Homeಮುಖಪುಟಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

- Advertisement -
- Advertisement -

ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿರುವ ಒಡಿಶಾ ಭೀಕರ ಸರಣಿ ರೈಲು ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಭಾನುವಾರ ಸಂಜೆ ಘಟನಾ ಸ್ಥಳದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೈಷ್ಣವ್ ಅವರು, ”ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡಲು ರೈಲ್ವೆ ನಿರ್ಧರಿಸಿದೆ” ಎಂದು ಹೇಳಿದರು.

”ಪ್ರಾಥಮಿಕ ತನಿಖೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಚಾಲಕನ ತಪ್ಪು ಕಂಡು ಬಂದಿಲ್ಲ ಹಾಗೂ ರೈಲ್ವೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲೂ ದೋಷಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಇದರ ಹಿಂದೆ ವಿಧ್ವಂಸಕ ಕೃತ್ಯದ ಸಂಚಿರಬಹುದೇ? ಎಂಬ ದೃಷ್ಟಿಕೋನದಲ್ಲಿ ಗಂಭೀರವಾಗಿ ಚಿಂತಿಸಲಾಗುತ್ತಿದೆ” ಎಂದು ಈ ಮೊದಲು ವೈಷ್ಣವ್ ಹೇಳಿದ್ದರು. ಈ ನಿಟ್ಟಿನಲ್ಲಿ ರೈಲ್ವೆ ಮಂಡಳಿ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ ಎನ್ನಲಾಗಿದೆ.

”ಘಟನಾ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಬಹುತೇಕ ಮುಗಿದಿದ್ದು ಹಳಿಗಳ ಪುನರ್‌ ಜೋಡಣೆ ಹಾಗೂ ಇತರೆ ತಾಂತ್ರಿಕ ಕೆಲಸಗಳನ್ನು ಮುಗಿಸಲು ಭಾರಿ ಪ್ರಮಾಣದಲ್ಲಿ ಕೆಲಸ ನಡೆದಿದೆ” ಎಂದು ರೈಲು ಸಚಿವರು ತಿಳಿಸಿದ್ದಾರೆ.

ಘಟನೆ ಕುರಿತು:

ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹಂಗ ಬಜಾರ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್ ವಾಗ್ದಾಳಿ

ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್​ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಅಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 12 ಬೋಗಿಗಳು ಹಳಿ ತಪ್ಪಿ ಪಕ್ಕದ ಟ್ರ್ಯಾಕ್​ಗೆ ಉರುಳಿವೆ. ಅತ್ತ, ಯಶವಂತಪುರದಿಂದ ಹೌರಾಗೆ ಹೋಗುತ್ತಿದ್ದ ಇನ್ನೊಂದು ರೈಲು ಈ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಎರಡು ಪ್ಯಾಸೆಂಜರ್ ರೈಲುಗಳಿಗೆ ಬಹಳ ಹಾನಿಯಾಗಿದೆ.

ಈ ದುರಂತ ಸಂಭವಿಸಿದ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ನೂರಾರು ಜೀವಗಳನ್ನು ಉಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಹುತೇಕ ಎಲ್ಲವನ್ನೂ ತೆರವುಗೊಳಿಸಿ ಆದಷ್ಟೂ ಬೇಗ ಸಂಚಾರಕ್ಕೆ ಟ್ರ್ಯಾಕ್​ಗಳನ್ನು ಅನುವು ಮಾಡಿಕೊಡುವತ್ತ ಕಾರ್ಯಗಳು ನಡೆಯುತ್ತಿವೆ.

ಘಟನೆಗೆ ಕಾರಣ:

ತಪ್ಪಾದ ಸಿಗ್ನಲ್ ಕಾರಣದಿಂದ ರೈಲು ಅಪಘಾತವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂನ ಪ್ರಕ್ರಿಯೆಯಲ್ಲಿ ಆದ ಬದಲಾವಣೆ ಕಾರಣ ಎಂಬುದು ಗೊತ್ತಾಗಿದೆ ಎಂದು ರೈಲ್ವೆ ಸಚಿವ ವೈಷ್ಣವ್ ಹೇಳಿದ್ದರು. ಇದೀಗ ಸಿಬಿಐ ತನಿಖೆಯಾದಲ್ಲಿ ಇನ್ನಷ್ಟು ವಿಚಾರಗಳು ಮತ್ತು ಲೋಪದೋಷಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...