Homeಮುಖಪುಟರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ವಿಧಾನಸಭೆ ಅಧಿವೇಶನ ಸಮೀಪಿಸುತ್ತಿರುವ ನಡುವೆಯೇ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯದ ಎಲ್ಲಾ 200 ಮಂದಿ ಶಾಸಕರಿಗೆ ಸತ್ಯದ ಪರ ನಿಲ್ಲುವಂತೆ ಹಾಗೂ ಪ್ರಜಾಪ್ರಭುತ್ವ ರಕ್ಷಿಸಬೇಕೆಂದು ಬಹಿರಂಗ ಪತ್ರ ಬರೆದಿದ್ದಾರೆ.

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಎಲ್ಲರಿಗೂ ಮನವಿ ಮಾಡುತ್ತೇವೆ. ನಮ್ಮ ಮೇಲೆ ಜನರು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳಬೇಕು, ಮತ್ತು ಕೆಟ್ಟ ಸಂಪ್ರದಾಯವನ್ನು ದೂರವಿಡಬೇಕು. ಜನರ ಅಭಿಪ್ರಾಯ ಕೇಳಬೇಕು ಎಂದು ಸಲಹೆ ನೀಡಿದ್ದಾರೆ.

ನೀವು ಯಾವುದೇ ಪಕ್ಷದಲ್ಲಿರಿ, ಆದರೆ ಜನರ ಭಾವನೆಗಳನ್ನು ಗೌರವಿಸಿ. ಸತ್ಯವನ್ನು ಮನಸ್ಸಿನಲ್ಲಿಟ್ಟುಕೊಂಡು ಜನರಿಂದ ಆಯ್ಕೆಯಾದ ಸರ್ಕಾರ ಜನರಿಗೆ ಹೇಗೆ ಕೆಲಸ ಮಾಡಿಕೊಡಬೇಕೆಂಬ ಬಗ್ಗೆ ಚಿಂತನೆ ನಡೆಸಬೇಕು ಎಂಬ ಬಗ್ಗೆ ಆಲೋಚಿಸಿರಿ ಎಂದು ಮನವಿ ಮಾಡಿದ್ದಾರೆ.

2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜಸ್ಥಾನ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿರುವ ಗೆಹ್ಲೋಟ್, ಕೊರೊನಾ ಸಂದರ್ಭದಲ್ಲಿ ಸರ್ಕಾರ ಅದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಆರ್ಥಿಕತೆಯನ್ನು ಬಲಪಡಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೊನ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ನಮ್ಮ ಸ್ವಂತ ಜನರು ಪ್ರತಿಪಕ್ಷ ಬಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರ ಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಚಿನ್ ಪೈಲಟ್ ಸೇರಿ 19 ಕಾಂಗ್ರೆಸ್ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ವಿಧಾನಸಭೆ ಅಧಿವೇಶನ ಆಗಸ್ಟ್ 14 ರಂದು ನಡೆಯಲಿದೆ.

ಅಧಿವೇಶನದ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಹಲವು ಶಾಸಕರನ್ನು ಗುಜರಾತ್‌ನ ರೆಸಾರ್ಟ್‌ಗೆ ರವಾನಿಸುತ್ತಿದೆ.

ಗೆಹ್ಲೊಟ್ ಬರೆದಿರುವ ಬಹಿರಂಗ ಪತ್ರದಲ್ಲಿ ವಿಶ್ವಾಸಮತ ಯಾಚಿಸುವ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು ಸರ್ಕಾರ ಉರುಳಿಸಲು ಪಿತೂರಿ ನಡೆಸಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...