Homeಮುಖಪುಟಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರ ಮೇಲೆ ಅತ್ಯಾಚಾರ, ಕೊಲೆ ಮತ್ತು ರಾಷ್ಟ್ರೀಯ ಭದ್ರಾತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

13 ವರ್ಷದ ಅಪ್ತಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುರ್ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಾಲಕಿಯ ಶವವು ಆರೋಪಿಯೊಬ್ಬರ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳ ಕತ್ತು ಹಿಸುಕಲಾಗಿದೆ, ಕಣ್ಣು ಕೀಳಲಾಗಿದೆ, ನಾಲಿಗೆ ಕತ್ತರಿಸಲಾಗಿದೆ ಎಂದು ಬಾಲಕಿಯ ತಂದೆ ದೂರಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಮತ್ತು ಕತ್ತು ಹಿಸುಕಿರುವುದು ಮಾತ್ರ ದೃಢಪಟ್ಟಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರ ಮೇಲೆ ಅತ್ಯಾಚಾರ, ಕೊಲೆ ಮತ್ತು ರಾಷ್ಟ್ರೀಯ ಭದ್ರಾತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೋದಿಂದ 130 ಕಿ.ಮೀ ದೂರದಲ್ಲಿರುವ ಹಳ್ಳಿಯಲ್ಲಿ ಈ ಅಮಾನವೀಯ ಘಟನೆ ಶುಕ್ರವಾರ ನಡೆದಿದೆ. ನನ್ನ ಮಗಳು ಶುಕ್ರವಾರ ಕಾಣೆಯಾಗಿದ್ದಳು. ಊರಿಲೆಲ್ಲಾ ಹುಡುಕಿದಾಗ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಅವಳ ಕಣ್ಣುಗಳನ್ನು ಕೀಳಲಾಗಿತ್ತು, ಬಟ್ಟೆಯಿಂದ ಕತ್ತು ಹಿಸುಕಲಾಗಿತ್ತು ಎಂದು ಬಾಲಕಿಯ ತಂದೆ ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಖಂಡಿಸಿದ್ದಾರೆ. ಅಂತ್ಯಂತ ನಾಚಿಕೆಗೇಡಿನ ಕೃತ್ಯ. ಹಿಂದಿನ ಸಮಾಜವಾದಿ ಪಕ್ಷಕ್ಕೂ, ಈಗಿನಿ ಬಿಜೆಪಿ ಪಕ್ಷಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಯುಪಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ ಎಂದು ಟೀಕಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಅಜಮ್‌ಘಡದ ಬನ್ಸ್‌ಗಾಂವ್‌ನಲ್ಲಿ ದಲಿತ ಮುಖ್ಯಸ್ಥ ಸತ್ಯಮೇವ್ ಜಯತೆ ಪಪ್ಪು ಅವರನ್ನು ಕ್ರೂರವಾಗಿ ಹತ್ಯೆಗೈದ ಸುದ್ದಿ ಬಹಳ ದುಃಖಕರವಾಗಿದೆ. ಯುಪಿಯಲ್ಲಿ ದಲಿತರ ಮೇಲೆ ಈ ರೀತಿಯ ದೌರ್ಜನ್ಯ ಮತ್ತು ಕೊಲೆಗಳು ಮುಂದುವರಿದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಳ್ವಿಕೆಯಲ್ಲಿ ದಲಿತ ದೌರ್ಜನ್ಯವು ಮುಗಿಲು ಮುಟ್ಟಿದೆ. ಇದು ಜಂಗಲ್ ರಾಜ್ ಅಲ್ಲದೇ ಮತ್ತೇನು? ನಮ್ಮ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ, ನಮ್ಮ ಮನೆ ಸುರಕ್ಷಿತವಾಗಿಲ್ಲ, ಎಲ್ಲೆಲ್ಲೂ ಭಯ ಆವರಿಸಿದೆ. ಆಡಳಿತ ನಡೆಸಲು ವಿಫಲವಾಗಿರುವ ಯೋಗಿ ಆದಿತ್ಯಾನಾಥ್ ರಾಜೀನಾಮೆ ನೀಡಬೇಕೆಂದು ಭೀಮ್ ಆರ್ಮಿ ಮುಖಸ್ಥ ಚಂದ್ರಶೇಖರ್ ಅಜಾದ್ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊಲೆ, ಅತ್ಯಾಚಾರಗಳು ಅವ್ಯಾಹತವಾಗಿ ಮುಂದುವರೆಯುತ್ತಲೇ ಇವೆ ಎಂಬ ಆರೋಪ ಸಾಮಾನ್ಯವಾಗಿದೆ. ಕಳೆದ ವಾರ ತಾನೇ 6 ವರ್ಷದ ಪುಟ್ಟ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಆರೋಪಿಗಳನ್ನು ಶುಕ್ರವಾರ ಬಂಧಿಸಲಾಗಿತ್ತು. ಆ ಬಾಲಕಿಗೆ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಇನ್ನು ಅಪಾಯದಿಂದ ಹೊರಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...