Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...