Homeಮುಖಪುಟಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ರಾಜೀನಾಮೆ!

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ರಾಜೀನಾಮೆ!

- Advertisement -
- Advertisement -

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಶನಿವಾರದಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ಮಾನ್ಯ ಗವರ್ನರ್‌ ಅವರಿಗೆ ನನ್ನ ರಾಜೀನಾಮೆ ಪತ್ರವನ್ನು ನೀಡಿದ್ದಾಗಿ ಹೇಳಿದ್ದಾರೆ.

ಇಂದು ಬೆಳಿಗ್ಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಕರೆ ಮಾಡಿ ತಮ್ಮ ರಾಜೀನಾಮೆ ನಿರ್ಧಾರವನ್ನು ತಿಳಿಸಿದ್ದೆ, ನಾನು ತುಂಬಾ ಅವಮಾನಿತನಾಗಿದ್ದೇನೆ ಎಂದು ಹೇಳಿದ್ದಾರೆ.

ತನ್ನ ತಂದೆ ರಾಜೀನಾಮೆ ನೀಡುವುದಾಗಿ ಮತ್ತು ನಮ್ಮ ಕುಟುಂಬ ಹೊಸ ಆರಂಭಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಅವರ ಮಗ ರಣಿಂದರ್ ಸಿಂಗ್ ಹೇಳಿದ್ದಾರೆ. ಅವರ ಈ ಹೇಳಿಕೆಯು ಅಮರಿಂದರ್‌ ಅವರು ಹೊಸ ಪಕ್ಷವನ್ನು ಕಟ್ಟಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ, ರಾಜೀನಾಮೆ ನಂತರ ಮಾತನಾಡಿದ ಅಮರಿಂದರ್‌ ಸಿಂಗ್‌, ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಎಂದು ಹೇಳಿದ್ದಾರೆ. ಆದರೂ, ಹೊಸ ಪಕ್ಷ ಕಟ್ಟುತ್ತಿರುವುದರ ಬಗ್ಗೆ ಯಾವುದೆ ನಿರಾಕರಣೆ ಮಾಡಿಲ್ಲ.

“ಯಾವಾಗಲೂ ಒಂದು ಆಯ್ಕೆ ಇರುತ್ತದೆ. ಸಮಯ ಬಂದಾಗ ನಾನು ಆ ಆಯ್ಕೆಯನ್ನು ಬಳಸುತ್ತೇನೆ … ಈ ಸಮಯದಲ್ಲಿ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ” ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...