Homeಕರ್ನಾಟಕನೂತನ ಸಿಎಂ ಆಯ್ಕೆ ಜವಾಬ್ದಾರಿ ಖರ್ಗೆ ಹೆಗಲಿಗೆ

ನೂತನ ಸಿಎಂ ಆಯ್ಕೆ ಜವಾಬ್ದಾರಿ ಖರ್ಗೆ ಹೆಗಲಿಗೆ

- Advertisement -
- Advertisement -

ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರು ಆಗಬೇಕೆಂಬ ನಿರ್ಧಾರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತೆಗೆದುಕೊಳ್ಳಲಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಪಂಚತಾರಾ ಹೋಟೆಲ್‌ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಾಸಕರ ಸಭೆ ನಡೆಯಿತು. ಯಾರು ಮುಖ್ಯಮಂತ್ರಿಯಾಗಬೇಕೆಂಬ ನಿರ್ಧಾರವನ್ನು ಖರ್ಗೆಯವರು ತೆಗೆದುಕೊಳ್ಳುವಂತೆ ಪಕ್ಷವು ನಿರ್ಧರಿಸಿದೆ.

ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ಬಿಕ್ಕಟ್ಟಿಗೆ ಸಿಲುಕುವ ಆತಂಕ ಎದುರಾಗಿದೆ.

ಸಭೆ ನಡೆದ ಬೆಂಗಳೂರು ಹೊಟೇಲ್‌ನ ಹೊರಗೆ ಜಮಾಯಿಸಿದ್ದ ಈ ಇಬ್ಬರು ನಾಯಕರ ಬೆಂಬಲಿಗರು ಘೋಷಣೆ ಕೂಗಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬಬಾರಿಯಾ ಮತ್ತು ಜಿತೇಂದ್ರ ಸಿಂಗ್ ಅಲ್ವಾರ್ ಅವರು ವೀಕ್ಷಕರಾಗಿ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಗುರುವಾರ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ‘ಸಮಾನ ಮನಸ್ಕ’ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರಡು ದಿನಗಳಲ್ಲಿ ಪಡೆದುಕೊಳ್ಳಲಿದೆ.

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ಬೆಂಬಲಿಗರು ಅವರ ಮನೆಯ ಹೊರಗೆ ಪೋಸ್ಟರ್ ಹಾಕಿದ್ದು, “ಕರ್ನಾಟಕದ ಮುಂದಿನ ಮುಖ್ಯಮಂತ್ರಿ” ಎಂದು ಉಲ್ಲೇಖಿಸಿದ್ದಾರೆ.

ಶಿವಕುಮಾರ್ ಅವರ ಮನೆಯ ಹೊರಗೂ ಪೋಸ್ಟರ್‌ಗಳು ಕಂಡು ಬಂದಿದ್ದು, “ಕರ್ನಾಟಕದ ನೂತನ ಮುಖ್ಯಮಂತ್ರಿ”ಯವರಿಗೆ “ಹುಟ್ಟುಹಬ್ಬದ ಶುಭಾಶಯಗಳು” ಎಂದು ಕೋರಲಾಗಿದೆ. ನಾಳೆ ಡಿ.ಕೆ.ಶಿವಕುಮಾರ್‌ ಅವರ ಹುಟ್ಟುಹಬ್ಬವಾಗಿದೆ.

224 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ದಿಗ್ವಿಜಯ ಸಾಧಿಸಿದೆ. 2018ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು. ಈಗ ಕೇವಲ 66 ಸ್ಥಾನಗಳನ್ನು ಮಾತ್ರ ಗೆದ್ದಿದೆ.

ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಮೀಸಲಾಗಿದ್ದ ಒಂದೇ ಒಂದು ಸ್ಥಾನವನ್ನೂ ಬಿಜೆಪಿ ಗೆದ್ದಿಲ್ಲ. ಕರ್ನಾಟಕವು 51 ಮೀಸಲು ಕ್ಷೇತ್ರಗಳನ್ನು ಹೊಂದಿದೆ, ಅವುಗಳಲ್ಲಿ 36 ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮತ್ತು 15 ಎಸ್‌ಟಿ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...