Homeಮುಖಪುಟಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ವಜಾಗೊಳಿಸಲಾಗಿದೆ

- Advertisement -
- Advertisement -

2002ರ ಕೋಮು ಹಿಂಸಾಚಾರದ ಸಂದರ್ಭದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಕುಟುಂಬದ ಹಲವು ಸದಸ್ಯರನ್ನು ಕೊಂದ 11 ಮಂದಿಯ ಬಿಡುಗಡೆಯ ವಿರುದ್ಧ ಸಂತ್ರಸ್ತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈಗ ವಜಾಗೊಳಿಸಲಾಗಿರುವ ಅರ್ಜಿಯಲ್ಲಿ- ಬಿಡುಗಡೆಯ ಮನವಿಯನ್ನು ಪರಿಗಣಿಸಲು ಗುಜರಾತ್ ಸರ್ಕಾರಕ್ಕೆ ತಿಳಿಸಿದ ಮೇ 2022ರ ಆದೇಶವನ್ನು ಪರಿಶೀಲಿಸುವಂತೆ ಬಿಲ್ಕಿಸ್‌ ಬಾನೋ ಅವರು ನ್ಯಾಯಾಲಯವನ್ನು ಕೋರಿದ್ದರು. “ಬಿಡುಗಡೆಯ ಆಧಾರದ ಮೇಲೆ ಸವಾಲು ಹಾಕಿರುವ ಬಿಲ್ಕಿಸ್ ಅವರ ಇನ್ನೊಂದು ಪ್ರಕರಣ, ಈ ನಿರ್ಧಾರದಿಂದ ತಕ್ಷಣವೇ ಪರಿಣಾಮ ಬೀರುವುದಿಲ್ಲ, ವಿವರವಾದ ಆದೇಶ ಇನ್ನೂ ಲಭ್ಯವಿಲ್ಲ” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ 11 ಅಪರಾಧಿಗಳನ್ನು ಆಗಸ್ಟ್ 15ರಂದು ಜೈಲಿನಿಂದ ಹೊರಗೆ ಬಿಡಲಾಯಿತು. ಅವರಿಗೆ ಅವಧಿಪೂರ್ವ ಬಿಡುಗಡೆಯನ್ನು ನೀಡಲಾಯಿತು. ‘ಉತ್ತಮ ನಡವಳಿಕೆ’ ಕಾರಣವನ್ನು ನೀಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೊಂದಿಗೆ ಗುಜರಾತ್‌ನ ಬಿಜೆಪಿ ಸರ್ಕಾರವು 1992ರ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅನುಮತಿ ನೀಡಿತ್ತು.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಮುಂಚಿತವಾಗಿ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಇತ್ತಿಚಿನ ನೀತಿಯು ಹೇಳುತ್ತದೆ. ಆದರೆ ಅಂತಹ ಯಾವುದೇ ವಿನಾಯಿತಿಯನ್ನು ಹೊಂದಿರದ 1992ರ ನೀತಿಯು ಈ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂಬ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 2008ರಲ್ಲಿ ಈ ಅಪರಾಧಿಗಳಿಗೆ ಶಿಕ್ಷೆಯಾದಾಗ 1992ರ ನೀತಿಯು ಜಾರಿಯಲ್ಲಿತ್ತು.

ಇದನ್ನು ಪ್ರಶ್ನಿಸಿದ್ದ ಬಿಲ್ಕಿಸ್ ಬಾನೊ, ನೆರೆಯ ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆದಿರುವುದರಿಂದ ನಿರ್ಧಾರ ಕೈಗೊಳ್ಳಲು ಗುಜರಾತ್ ಸೂಕ್ತ ರಾಜ್ಯವಲ್ಲ ಎಂದು ವಾದಿಸಿದ್ದರು. ಗುಜರಾತ್‌ನಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಬಾನೊ ಅವರು 2004ರಲ್ಲಿ ತಿಳಿಸಿದ್ದ ಬಳಿಕ ಸುಪ್ರೀಂ ಕೋರ್ಟ್‌ನ ಸೂಚನೆ ಮೇರೆಗೆ ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ಅಪರಾಧಿಗಳು ಸುಮಾರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರಲ್ಲಿ ಒಬ್ಬಾತ ‘ಜೀವಾವಧಿ ಕೈದಿಗಳ ನೀತಿ’ಯ ಪ್ರಕಾರ ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದನು. ಆ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಈ ವರ್ಷದ ಮೇನಲ್ಲಿ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು.

ಮೂರು ತಿಂಗಳ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಅವರಲ್ಲಿ ಒಬ್ಬರು ಇತ್ತೀಚೆಗೆ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಶಾಸಕರಾಗಿರುವ ತಮ್ಮ ಮಗಳ ಪರವಾಗಿ ಪ್ರಚಾರ ಮಾಡಿದ್ದರು.

ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿದ್ದ 2002ರ ಅವಧಿಯಲ್ಲಿ ಕೋಮು ಗಲಭೆಗಳು ನಡೆದಿದ್ದವು. ಆ ಸಮಯದಲ್ಲಿ ನಡೆದಿದ್ದ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರ ಈ ಬಿಡುಗಡೆಯನ್ನು ಸಮರ್ಥಿಸಿದೆ. ಬಿಜೆಪಿಯ ನಾಯಕರು ಅಪರಾಧಿಗಳನ್ನು ಬಣ್ಣಿಸಿದ್ದು,  ‘ಸಂಸ್ಕೃತಿ (ಸಂಸ್ಕೃತಿ) ಬ್ರಾಹ್ಮಣರು’ ಎಂದಿದ್ದಾರೆ.

ಬಿಡುಗಡೆಗೆ ಶಿಫಾರಸು ಮಾಡಿದ ಸಮಿತಿಯಲ್ಲಿ ಬಿಜೆಪಿ ನಾಯಕರು ಇದ್ದರು, ಇದನ್ನು ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ಅನುಮೋದಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ ಬಿಲ್ಕಿಸ್‌ ಬಾನೋ ಅವರ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಪ್ರಕರಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಅರ್ಜಿ ವಿಚಾರಣೆಯನ್ನು ಕಳೆದ ವಾರ ಮುಂದೂಡಲಾಗಿತ್ತು. ಹಿಂದೆ ಸರಿದಿದ್ದಕ್ಕೆ ಕಾರಣವನ್ನು ನ್ಯಾಯಾಧೀಶರು ನೀಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...