Homeಮುಖಪುಟ’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್...

’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್ ಥಿಂಕರ್-2020 ಗೌರವ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ 3 ನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಪ್ರಾಸ್ಪೆಕ್ಟ್ ನಿಯತಕಾಲಿಕವು ತತ್ವಜ್ಞಾನಿಗಳು, ಬುದ್ಧಿಜೀವಿಗಳು, ಕಲಾವಿದರು, ವಿಜ್ಞಾನಿಗಳು ಮತ್ತು ಬರಹಗಾರರನ್ನು ಒಳಗೊಂಡಂತೆ ‘ಟಾಪ್ 50 ಚಿಂತಕರು-2020’ ಅನ್ನು ಓದುಗರ ಮತದಾನ, ತಜ್ಞರು ಮತ್ತು ಸಂಪಾದಕರ ಸಮಿತಿಯ ಅಭಿಪ್ರಾಯದ ಆಧಾರದ ಮೇಲೆ ಆಯ್ಕೆ ಮಾಡಿತ್ತು.

ಇದೀಗ ಸಚಿವೆ ಕೆ.ಕೆ. ಶೈಲಜ ಮೊದಲ ಸ್ಥಾನಿಯಾಗಿದ್ದು, ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ ಮೂರನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ವಿಶೇಷವೆಂದರೆ, ಇದರ ಅಗ್ರ 50 ರ ಪಟ್ಟಿಯಲ್ಲಿ ಒಟ್ಟು 26 ಮಹಿಳೆಯರು ಸ್ಥಾನ ಪಡೆದಿದ್ದಾರೆ, ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

“2018 ರ ಮಾರಣಾಂತಿಕ ನಿಪಾ ಕಾಯಿಲೆ ನಿಭಾಯಿಸಲು ತೋರಿದ ಚತುರತೆಯನ್ನು ’ವೈರಸ್’ ಸಿನಿಮಾದಲ್ಲಿ ಸ್ಮರಿಸಲಾಯಿತು” ಎಂದು ಪತ್ರಿಕೆ ಕೇರಳ ಆರೋಗ್ಯ ಸಚಿವರನ್ನು ಹೊಗಳಿದೆ.

ಕೇರಳ ಆರೋಗ್ಯ ಮಂತ್ರಿ ಕೆ.ಕೆ ಶೈಲಜಾ

ಪ್ರಾಸ್ಪೆಕ್ಟ್ ಪ್ರಕಾರ, “ಶೈಲಾಜಾ ಟೀಚರ್‌ 2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ, ಜನವರಿಯಲ್ಲಿ ಕೊರೊನಾ ಇನ್ನೂ ಚೀನಾದಲ್ಲಿದ್ದಾಗ ಅದರ ಅನಿವಾರ್ಯ ಆಗಮನವನ್ನು ನಿಖರವಾಗಿ ಮುನ್ಸೂಚನೆ ನೀಡಿದ್ದಲ್ಲದೆ, ಅದರ ಪರಿಣಾಮಗಳನ್ನು ಸಂಪೂರ್ಣವಾಗಿ ಗ್ರಹಿಸಿದ್ದರು. ಅವರು ಶೀಘ್ರವಾಗಿ ವಿಶ್ವ ಆರೋಗ್ಯ ಸಂಸ್ಥೆಯ “ಪರೀಕ್ಷೆ, ಜಾಡು ಮತ್ತು ಪ್ರತ್ಯೇಕಿಸುವ” ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದರು. ಮತ್ತು ವಿಮಾನ ನಿಲ್ದಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ನಿರ್ಣಾಯಕ ಸಮಯವನ್ನು ಪಡೆದರು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

ಸಾಂಕ್ರಮಿಕವು ಆರಂಭಿಕ ಹಂತದಲ್ಲಿರುವಾಗ ಕೆ.ಕೆ.ಶೈಲಜಾ ರಾಜ್ಯದಲ್ಲಿ ಕೊರೊನಾ ವೈರಸನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಲ್ಲದೆ, ವೈರಸ್ ಹರಡುವ ರೇಖೆಯನ್ನು ಚಪ್ಪಟೆಗೊಳಿಸುವುದಕ್ಕೆ ಜಾಗತಿಕ ಮನ್ನಣೆ ಪಡೆದರು. ಯುಕೆ ಪತ್ರಿಕೆ ‘ದಿ ಗಾರ್ಡಿಯನ್’ ತನ್ನ ಲೇಖನದಲ್ಲಿ ಸಚಿವರನ್ನು ‘ಕೊರೊನಾ ವೈರಸ್ ಸ್ಲೇಯರ್’ ಮತ್ತು ’ರಾಕ್ ಸ್ಟಾರ್ ಆರೋಗ್ಯ ಮಂತ್ರಿ ’ಎಂದು ಶ್ಲಾಘಿಸಿದೆ.

ಕೊರೊನಾ ಸಾಂಕ್ರಾಮಿಕ ವಿರುದ್ದ ಹೋರಾಡುತ್ತಿರುವ ಸಾರ್ವಜನಿಕ ಸೇವಕರನ್ನು ಗೌರವಿಸಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಲು ವಿಶ್ವಸಂಸ್ಥೆಯು ಶೈಲಾಜಾ ಅವರನ್ನು ಆಹ್ವಾನಿಸಿ ಗೌರವಿಸಿತ್ತು.

ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಬರಹಗಾರ ಮತ್ತು ಬುಕರ್ ಪ್ರಶಸ್ತಿ ವಿಜೇತ ಹಿಲರಿ ಮಾಂಟೆಲ್ ಮತ್ತು ಪರಿಸರವಾದಿ ಡೇವಿಡ್ ಅಟೆನ್‌ಬರೋ ಈ ಪಟ್ಟಿಯಲ್ಲಿರುವ ಇತರ ಕೆಲವು ಹೆಸರುಗಳು.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...