Homeಮುಖಪುಟಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಅಂದು ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ: ಬಿ.ಎಲ್.ಸಂತೋಷ್

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಅಂದು ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ: ಬಿ.ಎಲ್.ಸಂತೋಷ್

ಬ್ರಿಟಿಷರಲ್ಲಿ ಕ್ಷಮೆಯಾಚಿಸುವಂತೆ ಗಾಂಧೀಜಿಯವರೇ ಸಾವರ್ಕರ್‌ ಅವರಿಗೆ ಸಲಹೆ ನೀಡಿದ್ದರು ಎಂದು ರಾಜನಾಥ್‌ ಸಿಂಗ್‌ ಅವರು ಕಳೆದ ಅಕ್ಟೋಬರ್‌‌ನಲ್ಲಿ ಸುಳ್ಳು ಹೇಳಿದ್ದರು. ಈಗ ಬಿ.ಎಲ್‌.ಸಂತೋಷ್‌ ಅವರ ಸರದಿ...

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಆರ್‌ಎಸ್‌ಎಸ್‌ ಹುಟ್ಟಿರಲಿಲ್ಲ. ಹೀಗಾಗಿ ನಾವು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಹೇಳಿರುವ ವಿಡಿಯೊ ವೈರಲ್ ಆಗಿದೆ.

ಮಂಗಳೂರಿನ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗದಲ್ಲಿ ಮಾತನಾಡಿರುವ ಅವರ ಸರಣಿ ವಿಡಿಯೊಗಳನ್ನು ಬಿಜೆಪಿಯ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗುತ್ತಿದ್ದು, “ನಮ್ಮ ರಾಜ್ಯದ ಅನೇಕ ರಾಜಕಾರಣಿಗಳು, ನಮ್ಮ ರಾಜ್ಯದ ಸಿದ್ದರಾಮಯ್ಯನವರು, ಸ್ವಾತಂತ್ರ್ಯಕ್ಕಾಗಿ ಏನ್ ಬಲಿದಾನ ಮಾಡಿದ್ದಾರಾ ಎಂದು ಕೇಳುತ್ತಿದ್ದಾರೆ. ಆದರೆ ನಾವು ಹುಟ್ಟಿರಲಿಲ್ಲ. ಹುಟ್ಟಿದ್ದರೆ ನಾವು ಬಲಿದಾನ ಮಾಡುತ್ತಿದ್ದೆವು. ನಾವು ಆ ಸಂದರ್ಭದಲ್ಲಿ ಹುಟ್ಟಿರಲಿಲ್ಲ ಎಂಬುದು ಭಗವಂತನ ನಿಯಮ” ಎಂದು ಹೇಳಿದ್ದಾರೆ.

“ಹುಟ್ಟಿದ್ದವರ ಹೆಸರಲ್ಲಿ ಕಾಂಗ್ರೆಸ್‌ನಲ್ಲಿ ಎಷ್ಟು ಮಂದಿ ಅಂಗಡಿ ಇಟ್ಟುಕೊಂಡಿದ್ದಾರೆಂಬುದು ಇಲ್ಲಿರುವವರಿಗೆ ಚೆನ್ನಾಗಿ ಗೊತ್ತು. ಗಾಂಧೀಜಿ ಹೆಸರಲ್ಲಿ ಊರೂರಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಗಾಂಧೀಜಿಗೆ ಹೆಸರಲ್ಲಿ ಪಾಪವನ್ನು ಯಾರಾದರೂ ಮಾಡಿದ್ದರೆ ಅದು ಕಾಂಗ್ರೆಸ್‌ನವರೇ. ಇದು ಸಿದ್ದರಾಮಯ್ಯನವರಿಗೆ ಯಾವತ್ತೂ ಅರ್ಥವಾಗುವುದಿಲ್ಲ. ನಾವು ಹುಟ್ಟಿರಲಿಲ್ಲ. ಹಾಗಾಗಿ ಬಲಿದಾನ ಮಾಡಲಿಲ್ಲ. ಬಲಿದಾನ ಮಾಡುವ ವಿಚಾರ ಬಂದಾಗ, ನಮ್ಮಷ್ಟು ಬಲಿದಾನ ಇನ್ನಾರೂ ಮಾಡಲಿಲ್ಲ” ಎಂದಿದ್ದಾರೆ.

“ತುರ್ತು ಪರಿಸ್ಥಿತಿ ಕಾಲದಲ್ಲಿ ಜೈಲಿಗೆ ಹೋದವರಲ್ಲಿ ಹೆಚ್ಚು ಜನ ನಮ್ಮವರು. ಹೆದರಿಕೊಂಡು ಕರ್ನಾಟಕದ ರಾಜಕಾರಣಿಗಳು ಊರೂರು ಅಲೆದಾಡುತ್ತಿದ್ದಾಗ ಧೈರ್ಯಕೊಟ್ಟು ರಾಜಕೀಯ ಕ್ಷೇತ್ರದಲ್ಲಿ ಉಳಿಸಿದ್ದು ಇದೇ ಬಿಜೆಪಿಯವರು, ಇದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು. ಅದನ್ನು ಖಾಸಗಿಯಾಗಿ ಅವರೂ ಒಪ್ಪಿಕೊಳ್ಳುತ್ತಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

ಬಿಜೆಪಿ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೊದಲ್ಲಿ, “ಬೇರೆ ಬೇರೆ ಹೆಸರಲ್ಲಿ ರಾಜಕಾರಣ ಮಾಡಿದ್ದಾರೆ. ಸೋಶಿಯಲಿಸಂ, ಸೆಕ್ಯುಲರಿಸಂ ಹೆಸರಲ್ಲಿ ರಾಜಕಾರಣ ಮಾಡಿದ್ದಾರೆ. ಸೆಕ್ಯುಲರ್‌ ಎಂದು ಜೆಡಿಎಸ್‌ನವರು ಇಟ್ಟುಕೊಂಡಿದ್ದಾರೆ. ಏನ್ ಸೆಕ್ಯುಲರ್‌ ಇದೆ ಎಂದು ಈವತ್ತಿನವರೆಗೂ ನಮಗೆ ಗೊತ್ತಿಲ್ಲ. ದೇವಸ್ಥಾನಕ್ಕೆ ಹೋಗೋದೇ ಸೆಕ್ಯುಲರಿಸಂ, ಯಾಗ ಮಾಡೋದೆ ಸೆಕ್ಯುಲರಿಸಂ ಎಂದು ತಿಳಿದರೆ ಅದಕ್ಕಿಂತ ದೊಡ್ಡ ಭ್ರಮೆ ಇನ್ಯಾವುದೂ ಇಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಸೋಶಿಯಲಿಸಂ, ಸೆಕ್ಯುಲರಿಸಂ ಹೆಸರಲ್ಲಿ ದೇಶದ ರಾಜಕೀಯ ರಂಗದಲ್ಲಿ ಪ್ರವರ್ಧಮಾನಕ್ಕೆ ಬಂದ ಅನೇಕ ರಾಜಕಾರಣಿಗಳ ಹೆಸರುಗಳು ಕೇಳಿಬರುತ್ತವೆ. ಮೊದಲು ಜಯಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಸಮಗ್ರ ಕ್ರಾಂತಿ ಎಂದು ಆರಂಭಿಸಿದರು. ಅದಾದ ಮೇಲೆ ಜಾತಿವಾದಿಗಳಾದರು. ಈಗ ಕುಟುಂಬವಾದಿಗಳಾಗಿದ್ದಾರೆ. ಜಾತಿವಾದಿಗಳಾದರೂ ಸಹಿಸಿಕೊಳ್ಳಬಹುದು. ಯಾಕೆಂದರೆ ಕೋಟ್ಯಂತರ ಜನರಿಗೆ ಅವರು ಸಹಾಯ ಮಾಡುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್‌ ಕುರಿತಂತೆ ಬಿ.ಎಲ್.ಸಂತೋಷ್‌ ಹೇಳಿರುವ ಮಾತುಗಳು ಇತಿಹಾಸವನ್ನು ತಿರುಚಲು ಯತ್ನಿಸಿವೆ ಎಂಬ ಆರೋಪಗಳು ಬಂದಿವೆ. 1925ರಲ್ಲಿ ಆರ್‌ಎಸ್‌ಎಸ್‌ ಸ್ಥಾಪನೆಯಾಗಿದೆ ಎಂದು ಇತಿಹಾಸ ಹೇಳುತ್ತದೆ. ಸಂಘ ಪರಿವಾರದ ಪ್ರಮುಖ ನಾಯಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದರು ಎಂಬ ಕುರಿತು ಸಾಕಷ್ಟು ಚರ್ಚೆಗಳಾಗಿವೆ. “ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌‌ಎಸ್‌ಎಸ್ ಭಾಗಹಿಸಿರಲಿಲ್ಲ” ಎಂಬುದನ್ನು ಬಿ.ಎಲ್‌.ಸಂತೋಷ್ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ.

ಬಿ.ಎಲ್‌.ಸಂತೋಷ್ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು, “ಸರಿಯಾಗಿ ಕೇಳಿಸಿಕೊಳ್ಳಿ. ನಮ್ಮ‌‌ ಸಂತೋಷಣ್ಣನವರು ಅಪರೂಪಕ್ಕೆ ಸತ್ಯ‌ ಮಾತನಾಡಿದ್ದಾರೆ. ಕೇಳಿ: `ಆರ್ ಎಸ್ ಎಸ್ ನವರು ಎಂದಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರಾ ಎಂದು‌ ನಮ್ಮ ಸಿದ್ದರಾಮಯ್ಯನವರು ಆಗಾಗ ಕೇಳ್ತಿರ್ತಾರೆ. ಆ ಕಾಲದಲ್ಲಿ ನಾವು ಹುಟ್ಟಿರ್ಲಿಲ್ಲ, ಅದಕ್ಕೆ‌‌ ಭಾಗವಹಿಸಿಲ್ಲ.‌ಅದು ಭಗವಂತನ ಮಹಿಮೆ ನಾವೇನು‌ ಮಾಡ್ಲಿಕ್ಕಾಗುತ್ತೆ….’ ಅರೆರೆ ಇವರಿಗೇನಾಗಿದೆ? ಆರ್‌‌ಎಸ್‌ಎಸ್ ಹುಟ್ಟಿದ್ದು 1925ರಲ್ಲಿ. ಅದನ್ನು ಸ್ಥಾಪಿಸಿದ್ದ ಕೇಶವ ಬಲಿರಾಮ್ ಹೆಗಡೆ ಹುಟ್ಟಿದ್ದು 1889 ಏಪ್ರಿಲ್ ಒಂದರಂದು. ಅವರ ಗುರು ಮೂಂಜೆ ಹುಟ್ಟಿದ್ದು1872 ಡಿಸೆಂಬರ್ 12ರಂದು. ಸಂತೋಷಜ್ಜನವರು ಕಂಗನಾ ಸಿಂಡ್ರೋಮ್ ನಲ್ಲಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ. ದಿನೇಶ್ ಮಟ್ಟು ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ಸುಳ್ಳುಗಳನ್ನು ತೇಲಿಬಿಡುವುದು ಹೆಚ್ಚಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಳೆದ ಅಕ್ಟೋಬರ್‌ನಲ್ಲಿ, “ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದಿದ್ದರು. ಇವರ ಹೇಳಿಕೆಯನ್ನು ಇತಿಹಾಸಕಾರರು ಅಲ್ಲಗಳೆದಿದ್ದರು.

ಬಿಜೆಪಿಯ ಕಟ್ಟಾ ಬೆಂಬಲಿಗರಲ್ಲಿ ಒಬ್ಬರಾದ ನಟಿ ಕಂಗನಾ ರಣಾವತ್ ಅವರು ಟೈಮ್ಸ್ ನೌ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ, ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014ರಲ್ಲಿ ಬಂದಿದೆ” ಎಂದು ಹೇಳಿದ್ದರು. ಅಲ್ಲದೆ, “ಯಾರಾದರೂ ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ” ಎಂದೂ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...