Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...