Homeಕರ್ನಾಟಕ'ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ': ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

- Advertisement -
- Advertisement -

ಮಹಿಳಾ ದಿನಾಚರಣೆಯಂದೇ (Women’s Day) ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಅವರು, ಮಹಿಳೆಯೊಬ್ಬರ ಮೇಲೆ ಕೂಗಾಡಿ ಅವಮಾನ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮತ್ಯಾಲಪೇಟೆಯಲ್ಲಿ ನಡೆದಿದೆ.

ಕೋಲಾರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕೋಲಾರ ಸಂಸದ ಎಸ್.ಮುನಿಸ್ವಾಮಿ ಉದ್ಘಾಟಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಸುಜಾತಾ ಎಂಬವರು ಮಾರಾಟ ಮಳಿಗೆ ತೆರೆದಿದ್ದರು. ಅವರು ಹಣೆಗೆ ಕುಂಕುಮ ಧರಿಸಿಲ್ಲವೆಂದು ಅವರ ವಿರುದ್ಧ ಸಂಸದ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಮಹಿಳೆಗೆ ಸಂಸದರು ಅವಮಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸಂಸದರು ಹಾಗೂ ಅವರ ಬೆಂಬಲಿಗರು ಮಳಿಗೆಯ ಮುಂದೆ ನಿಂತು ಅವಮಾನಿಸಿದ್ದು, ”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಎಂದು ವ್ಯಕ್ತಿ ಸ್ವಾತಂತ್ರ್ಯವನ್ನೇ ಪ್ರಶ್ನಿಸಿದ್ದಾರೆ. ಈ ವೇಳೆ ಶಾಸಕ ಶ್ರೀನಿವಾಸಗೌಡ ತಡೆದರೂ ಸುಮ್ಮನಿರದ ಮುನಿಸ್ವಾಮಿ ಕೂಗಾಡಿದ್ದಾರೆ. ಪರಿಷತ್ ಸದಸ್ಯ ಗೋವಿಂದರಾಜು ಕೂಡ ಸಮಾಧಾನಿಸಲು ಯತ್ನಿಸಿದ್ದಾರೆ. ಆದರೆ, ಯಾರ ಮಾತಿನಿಂದಲೂ ಮುನಿಸ್ವಾಮಿ ಸಿಟ್ಟು ತಣ್ಣಗಾಗಿಲ್ಲ.”

”ಮುಂದುವರಿದು, ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..” ಎಂದು ಏಕವಚನದಲ್ಲೇ ಸಂಸದರು ಹರಿಹಾಯ್ದಿದ್ದಾರೆ. ಈ ವೇಳೆ, ಸಂಸದರಿಗೆ ಉತ್ತರಿಸಲಾಗದೆ ಮಹಿಳೆ ತಡಬಡಾಯಿಸಿದ್ದಾರೆ.

ಇದನ್ನೂ ಓದಿ: ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಸಂಸದರು ಮಹಿಳೆಯನ್ನು ತರಾಟೆಗೆ ತೆಗದುಕೊಳ್ಳುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರಿಗೆ ಅವರ ಉಡುಗೆತೊಡುಗೆ ವಿಚಾರದಲ್ಲಿ ಅವರದೇ ಆದ ಸ್ವಾತಂತ್ರ್ಯ ಇರುತ್ತದೆ ಅದನ್ನು ಪ್ರಶ್ನೆ ಮಾಡುವ ಹಕ್ಕು ಸಂಸದರಿಗೆ ಇಲ್ಲ ಎಂದು ಬಿಜೆಪಿ ಸಂಸದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಸಂಸದರ ವರ್ತನೆಯನ್ನು ಖಂಡಿಸಿರುವ ಕಾಂಗ್ರೆಸ್, ಇಂತಹ ಘಟನೆಗಳು ಬಿಜೆಪಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ. “ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ” ಎಂದು ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ. ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ? ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ! ಎಂದು ಟ್ವೀಟ್ ಮಾಡಿದೆ.

ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ಹೊರಹಾಕಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...