Homeಕರ್ನಾಟಕಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

- Advertisement -

ಕರ್ನಾಟಕ ರಾಜ್ಯದಲ್ಲಿ ಭಾನುವಾರ 456 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಆರು ಸಾವುಗಳು ಸಂಭವಿಸಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. 256 ಹೊಸ ಪ್ರಕರಣ ಮತ್ತು ಎರಡು ಸಾವುಗಳೊಂದಿಗೆ ಬೆಂಗಳೂರು ನಗರವು ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದೆ.

ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರ 59 ವಿದ್ಯಾರ್ಥಿಗಳು ಸೇರಿದಂತೆ ಈ ಭಾಗದಲ್ಲಿ ಕನಿಷ್ಠ 69 ಜನರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 2 ಓಮೈಕ್ರಾನ್ ರೂಪಾಂತರ ಕೊರೊನಾ ಸೋಂಕಿನ ವರದಿಗಳಾಗಿವೆ.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, “ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಕರಣಗಳು ಹೆಚ್ಚಾದರೆ ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸುವುದರಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ” ಎಂದು ತಿಳಿಸಿದ್ದಾರೆ. “ಆದರೆ, ನಿಯಮಿತವಾಗಿ ಆಫ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕೋವಿಡ್-19 ಪರಿಸ್ಥಿತಿಯನ್ನು ಸರ್ಕಾರವು ಗಂಟೆಗೊಮ್ಮೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದಿರುವ ಸಚಿವರು, ಯಾವುದೇ ಸಮಸ್ಯೆಯಾಗದಂತೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

“ಅಗತ್ಯವಿದ್ದರೆ ನಾವು ಪರೀಕ್ಷೆಗಳನ್ನು ನಿಲ್ಲಿಸುತ್ತೇವೆ. ಆದಾಗ್ಯೂ, ಪರೀಕ್ಷೆಗಳಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಬಹಳ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ದೈಹಿಕ ಅಂತರವನ್ನು ಕಾಯ್ದುಕೊಂಡು ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡುತ್ತೇವೆ” ಎಂದಿದ್ದಾರೆ.

“ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವುದರಿಂದ ಜನರು ಭಯಪಡಬೇಡಬೇಡಿ. ಒಂದು ವರ್ಷದ ಲಾಕ್‌ಡೌನ್ ನಂತರ ಶಾಲೆಗಳನ್ನು ಪ್ರಾರಂಭಿಸಿದ್ದೇವೆ. ಶಾಲೆಗಳನ್ನು ಮತ್ತೆ ಮುಚ್ಚಿದರೆ ಮಕ್ಕಳನ್ನು ತರಗತಿಗಳಿಗೆ ಕರೆತರುವುದು ಕಷ್ಟವಾಗುತ್ತದೆ” ಎಂದೂ ಸಚಿವರು ತಿಳಿಸಿದ್ದಾರೆ.

ಹಲವು ನಿಯಮ ಜಾರಿಗೊಳಿಸಿದ ಸರ್ಕಾರ

ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಜೊತೆಗೆ ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ 2 ಡೋಸ್ ಲಸಿಕೆ ಪಡೆದುಕೊಂಡ ನಾಗರಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಹೀಗಾಗಲೇ ಹೇಳಿದೆ.

“ಮುಂದಿನ ಆದೇಶದವರೆಗೆ ಕೇವಲ 500 ಜನರಿಗೆ ಮಾತ್ರ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು. ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಪ್ರವೇಶ ನೀಡಲಾಗುವುದು” ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.


ಇದನ್ನೂ ಓದಿ: ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು...
Wordpress Social Share Plugin powered by Ultimatelysocial