Homeಮುಖಪುಟಇಂದು ಎರಡನೇ ಹಂತದ ಚುನಾವಣೆ: ಎಲ್ಲರ ಚಿತ್ತ ಪಶ್ಚಿಮ ಬಂಗಾಳದ ನಂದಿಗ್ರಾಮದತ್ತ!

ಇಂದು ಎರಡನೇ ಹಂತದ ಚುನಾವಣೆ: ಎಲ್ಲರ ಚಿತ್ತ ಪಶ್ಚಿಮ ಬಂಗಾಳದ ನಂದಿಗ್ರಾಮದತ್ತ!

- Advertisement -
- Advertisement -

ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಗಳು ಇಂದು (ಏ.1) ನಡೆಯಲಿದ್ದು, ಅಸ್ಸಾಂನ 39 ಕ್ಷೇತ್ರಗಳು ಹಾಗೂ ಪಶ್ಚಿಮ ಬಂಗಾಳದ 30 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಜೊತೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಸ್ಪರ್ಧಿಸಿರುವ ನಂದಿಗ್ರಾಮ ಚುನಾವಣೆಯೂ ಇಂದು ನಡೆಯಲಿದೆ. ಹಾಗಾಗಿ ಎಲ್ಲರ ಚಿತ್ತ ನಂದಿಗ್ರಾಮದತ್ತ ಎಂಬಂತೆ ಆಗಿದೆ.

ಈ ಕ್ಷೇತ್ರದ ಎಲ್ಲಾ ಮತಗಟ್ಟೆಗಳನ್ನೂ ಸೂಕ್ಷ್ಮ ಮತಗಟ್ಟೆಗಳೆಂದು ಚುನಾವಣಾ ಆಯೋಗ ಘೋಷಿಸಿದೆ. ಕೇಂದ್ರೀಯ ಪಡೆಗಳ 651 ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ನಂದಿಗ್ರಾಮವು ಭಾರಿ ಕುತೂಹಲ ಕೆರಳಿಸಿದ ಕ್ಷೇತ್ರವಾಗಿದೆ. ಪಶ್ಚಿಮ ಬಂಗಾಳದ ಎರಡನೇ ಹಂತದ ಚುನಾವಣೆ ಒಟ್ಟು 30 ಕ್ಷೇತ್ರಗಳಲ್ಲಿ ನಡೆಯಲಿದ್ದು, 191 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಹಳೆಯ ವರಸೆ; ಹೊಸ ಪಾತ್ರಧಾರಿಗಳು

ಟಿಎಂಸಿ ಹಾಗೂ ಬಿಜೆಪಿ ಎಲ್ಲಾ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದಲ್ಲದೆ, ಸಿಪಿಎಂ 15 ಹಾಗೂ ಅದರ ಮಿತ್ರಪಕ್ಷಗಳು 15 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.

ಅಸ್ಸಾಂನ 39 ಕ್ಷೇತ್ರಗಳಲ್ಲಿ 26 ಮಹಿಳೆಯರೂ ಸೇರಿದಂತೆ ಒಟ್ಟು 345 ಮಂದಿ ಕಣದಲ್ಲಿದ್ದಾರೆ. ಬಿಜೆಪಿ 34 ಕ್ಷೇತ್ರ, ಅದರ ಮಿತ್ರಪಕ್ಷ ಅಸ್ಸಾಂ ಗಣ ಪರಿಷತ್‌ ಹಾಗೂ ಯುಪಿಪಿಎಲ್‌ ಕ್ರಮವಾಗಿ 6 ಹಾಗೂ 3 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿವೆ.

ಮಹಾಮೈತ್ರಿಯ ಪಕ್ಷಗಳಲ್ಲಿ ಕಾಂಗ್ರೆಸ್‌ 28 ಕ್ಷೇತ್ರಗಳು, ಎಐಯುಡಿಎಫ್‌ 7 ಹಾಗೂ ಬೋಡೊ ಪೀಪಲ್ಸ್‌ ಫ್ರಂಟ್‌ ನಾಲ್ಕು ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಹೊಸ ಪಕ್ಷ ಅಸ್ಸಾಂ ಜಾತೀಯ ಪರಿಷತ್‌ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...