Homeಮುಖಪುಟಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಯೂಟರ್ನ್ ತೆಗೆದುಕೊಂಡಿದ್ದಾರೆ.

ಪ್ರಕರಣ ತೀವ್ರ ಸ್ವರೂಪ ತೆಗೆದುಕೊಳ್ಳುತ್ತಿದ್ದಂತೆ ಧರ್ಮೇಂದ್ರ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಧಮೇಂದ್ರ, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ನುಣುಚಿಕೊಂಡಿದ್ದಾರೆ.

ಇದನ್ನೂ ಓದಿರಿ: ಸಿಎಂಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು

ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಧರ್ಮೇಂದ್ರ, “ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ನೀವು ಯಾವ ಲೆಕ್ಕ? ಗಾಂಧೀಜಿಯವರನ್ನು ಹತ್ಯೆ ಮಾಡುತ್ತೇವೆಂದರೆ ನಿಮ್ಮ ವಿಚಾರದಲ್ಲಿ ಯಾವ ತೀರ್ಮಾನಕ್ಕೆ ಬರಬಹುದು” ಎಂದು ಹೇಳಿಕೆ ನೀಡಿದ್ದರು. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಿದ್ದಷ್ಟೇ ಅಲ್ಲದೆ, ಕೊಲೆ ಬೆದರಿಕೆಯನ್ನೂ ಹಾಕಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮೇಂದ್ರ ವಿಡಿಯೋ ವೈರಲ್‌ ಆಗಿತ್ತು.

“ಹಿಂದೂವಾಗಿ ನಮ್ಮ ಶ್ರದ್ಧೆಯ ಕೇಂದ್ರ ದೇವಸ್ಥಾನ ಧ್ವಂಸವಾದ ಬಗ್ಗೆ ಅಸಹನೆಯಿಂದ ಮಾತನಾಡಿದ್ದೇನೆ. ಇದರ ಹಿಂದೆ ಯಾವುದೇ ಬೆದರಿಕೆ ಹಾಕುವ ದುರುದ್ದೇಶ ಇಲ್ಲ. ಗಾಂಧೀಜಿ ಹತ್ಯೆಯ ಕಾರಣವನ್ನು ವಿವರಿಸುವ ಭರದಲ್ಲಿ ಈ ಹೇಳಿಕೆ ಬಂದಿದೆ. ಈ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ. ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಿರುಚಲಾಗಿದ್ದು, ಹೇಳಿಕೆಯ ಉದ್ದೇಶವನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ” ಎಂದು ಯೂಟರ್ನ್‌ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿರಿ: ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...