Homeಮುಖಪುಟಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

- Advertisement -
- Advertisement -

ಕಳೆದ ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯದ ಕುರಿತು ಬೇಸರ ವ್ಯಕ್ತಪಡಿಸಿರುವ ಸ್ಪೀಕರ್ ಓಂ ಬಿರ್ಲಾ, ‘ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’ ಎಂದು ಸಂಸತ್ ಸದಸ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

‘ಗೌರವಾನ್ವಿತ ಸದಸ್ಯರೇ, ಡಿಸೆಂಬರ್ 13, 2023ರಂದು ಸದನದೊಳಗೆ ನಡೆದ ಅಹಿತಕರ ಘಟನೆಯು ನಮ್ಮೆಲ್ಲರಿಗೂ ಗಂಭೀರ ಕಾಳಜಿಯ ವಿಷಯವಾಗಿದ್ದು, ಈ ಬಗ್ಗೆ ನಾವು ನಮ್ಮ ಸಾಮೂಹಿಕ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಅದೇ ದಿನ ನಾವು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ, ಸಭೆಯಲ್ಲಿ ನೀಡಿದ ಕೆಲವು ಪ್ರಮುಖ ಸಲಹೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸದನದ ಒಳಗೆ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಆಳವಾದ ತನಿಖೆ ನಡೆಸಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಸದಸ್ಯರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ಸಮಿತಿಯ ವರದಿ ನೀಡಲಿದ್ದು, ಶೀಘ್ರದಲ್ಲೇ ಅದನ್ನು ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ, ಇವರು ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಾರೆ. ಸಂಸತ್ತಿನ ಕಟ್ಟಡ ಸಂಕೀರ್ಣದಲ್ಲಿ ಪುನಃ ಅಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ‘ಕಾಂಕ್ರೀಟ್ ಕ್ರಿಯಾ ಯೋಜನೆ’ಯನ್ನು ರೂಪಿಸಲಿದೆ’ ಎಂದು ವಿವರಣೆ ನೀಡಿದ್ದಾರೆ.

ಹಿಂದೆಯೂ ಇಂತಹ ಘಟನೆ ನಡೆದಿವೆ:

‘ಪಿಸ್ತೂಲುಗಳನ್ನು ತಂದದ್ದು, ಘೋಷಣೆಗಳನ್ನು ಕೂಗುವುದು, ಸಂದರ್ಶಕರ ಗ್ಯಾಲರಿಯಿಂದ ಜಿಗಿಯುವುದು ಮತ್ತು ಕರಪತ್ರಗಳನ್ನು ಎಸೆಯುವ ಪ್ರಕರಣಗಳು ಈ ಹಿಂದೆ ನಡೆದಿರುವುದಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ. ಕೆಲವು ಗೌರವಾನ್ವಿತ ಸದಸ್ಯರು ಪೆಪ್ಪರ್ ಸ್ಪ್ರೇ ತಂದು ಸದನದ ಒಳಗೆ ಸಿಂಪಡಿಸಿದ ಘಟನೆಗೆ ಕೂಡ ದೇಶ ಸಾಕ್ಷಿಯಾಗಿದೆ. ಅಂತಹ ಎಲ್ಲ ಘಟನೆಗಳ ಸಮಯದಲ್ಲಿ ಸದನವು ಮಾದರಿಯಾಗಿ ನಡೆದುಕೊಂಡಿದೆ. ಒಗ್ಗಟ್ಟು ಮತ್ತು ಅಂತಹ ಘಟನೆಗಳ ವಿರುದ್ಧ ತನ್ನ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿತ್ತು’ ಎಂದು ನೆನಪು ಮಾಡಿದ್ದಾರೆ.

‘ಸಂಸತ್ ಆವರಣದ ಭದ್ರತೆಯು ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂಬುದು ತಮಗೆಲ್ಲಾ ಚೆನ್ನಾಗಿ ತಿಳಿದಿರುತ್ತದೆ. ಅದರಂತೆ, ವಿವರವಾದ ಕ್ರಮವನ್ನು ರೂಪಿಸುವುದು ಸಂಸತ್ತಿನ ಜವಾಬ್ದಾರಿಯಾಗಿದೆ. ನಿಮ್ಮ ಸಲಹೆಗಳಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಯೋಜಿಸಿಸಲಾಗುವುದು’ ಎಂದು ಸ್ಪೀಕರ್ ಭರವಸೆ ನೀಡಿದ್ದಾರೆ.

‘ಕೆಲವು ಸದಸ್ಯರು ಮತ್ತು ಪಕ್ಷಗಳು ಈ ಘಟನೆಯನ್ನು ರಾಜಕೀಯಕ್ಕೆ ಲಿಂಕ್ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಇದರಿಂದ, ಕೆಲವು ಗೌರವಾನ್ವಿತ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಲು ಸದನದ ನಿರ್ಧಾರ ಮಾಡಿದ್ದು, ಇದು ಅನಗತ್ಯವಾಗಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲ ಗೌರವಾನ್ವಿತ ಸದಸ್ಯರು ಸದನದ ಘನತೆಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ಲೋಕಸಭೆಯ ಸ್ಪೀಕರ್ ಆಗಿ, ಅದನ್ನು ಖಚಿತಪಡಿಸಿಕೊಳ್ಳುವುದು ನನ್ನ ಪ್ರಯತ್ನವಾಗಿದೆ. ರಚನಾತ್ಮಕ ಸಂವಾದ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಮೂಲಕ ಸದಸ್ಯರು ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...