HomeUncategorizedಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

- Advertisement -
- Advertisement -

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ರಾಜ್ಯ ಸರ್ಕಾರಗಳಿಗೆ ಡೋಸ್‌ಗೆ 400 ರೂ. ಎಂದು ಬುಧವಾರ ಬೆಲೆ ನಿಗದಿಪಡಿಸಿದೆ.

ಸೋಮವಾರದಂದು ಕೇಂದ್ರ ಸರ್ಕಾರವು ವ್ಯಾಕ್ಸಿನೇಷನ್ ನೀತಿಗಳಲ್ಲಿ ಬದಲಾವಣೆ ಮಾಡಿ ಲಸಿಕೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಹ ನಿಯಮವನ್ನು ಜಾರಿಗೆ ತಂದಿತ್ತು. ಅದರಂತೆ ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಗಿ ಎಸ್‌ಐಐ ಟ್ವಿಟರ್ ಹ್ಯಾಂಡಲ್‌ನಲ್ಲಿ ಹೇಳಿಕೆ ನೀಡಿದೆ.

“ನಮ್ಮ ಸಾಮರ್ಥ್ಯದ 50% ಭಾರತ ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ನೀಡಲಾಗುವುದು. ಉಳಿದ 50% ದಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತೇವೆ” ಎಂದು ಸೀರಮ್‌‌ ಹೇಳಿದೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ನೀಡಿದ ವರದಿ

ಸೀರಮ್‌‌ ಸಂಸ್ಥೆಯು ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿದ್ದು, ಅದು ತನ್ನ ಹೇಳಿಕೆಯಲ್ಲಿ ವಿಶ್ವದ ಇತರ ಲಸಿಕೆಯನ್ನು ಹೋಲಿಕೆ ಮಾಡಿ, ತಾವು ಅತ್ಯಂತ ಕಡಿಮೆಗೆ ಲಸಿಕೆ ಮಾರಾಟ ಮಾಡುತ್ತಿದ್ದೇವೆ ಎಂದು ಕೂಡಾ ಹೇಳಿದೆ.

ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಈ ಹಿಂದೆ ಸೀರಮ್‌ ಕಡಿಮೆ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡುತ್ತಿತ್ತು ಎಂದು ಸೂಚಿಸಿದೆ.

ಅದು ತನ್ನ ಟ್ವೀಟ್‌ನಲ್ಲಿ, “ಸೀರಮ್‌ ಸಂಸ್ಥೆ ತನ್ನ ಕೋವಿಶೀಲ್ಡ್ ಲಸಿಕೆಗೆ ನಿಗದಿಪಡಿಸಿದ ಬೆಲೆ ರಾಜ್ಯ ಸರ್ಕಾರಗಳಿಗೆ ₹400/ಡೋಸ್, ಖಾಸಗಿ ಆಸ್ಪತ್ರೆಗಳಿಗೆ ₹600/ ಡೋಸ್. ಇದೇ ಸಂಸ್ಥೆ ಹಿಂದೆ ಕೇಂದ್ರ ಸರ್ಕಾರಕ್ಕೆ ₹157.50 ಕ್ಕೆ ನೀಡಿತ್ತು. ಲಸಿಕೆ ಖರೀದಿಯ ಹೊರೆ ರಾಜ್ಯಗಳ ತಲೆ ಮೇಲೆ!” ಲಸಿಕೆ ಖರೀದಿಗೆ ಎಷ್ಟು ಹಣ ಮೀಸಲಿರಿಸಿದ್ದೀರಿ?” ಎಂದು ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್ ಆದೇಶದ ನಂತರ ಆಕ್ಸಿಜನ್ ಪಡೆದ ದೆಹಲಿ ಆಸ್ಪತ್ರೆಗಳು

ವಿಡಿಯೊ ನೋಡಿ: ಅಸ್ಸಾಂ ರಾಜ್ಯದ ಹೊಸ ಡಿಎಸ್‌‌ಪಿ ಚಿನ್ನದ ಹುಡುಗಿ ‘ಹಿಮಾ ದಾಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...