Homeದಿಟನಾಗರಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

- Advertisement -
- Advertisement -

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶ್ರೇಯಾಸಿ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿದೆ. ಹಲವಾರು ಜನರು ಬಿಜೆಪಿಗೆ ಸೇರುತ್ತಿರುವ ಶ್ರೇಯಾಸಿ ಸಿಂಗ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೋಸ್ಟ್‌ನ ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಬಿಜೆಪಿಗೆ ಸೇರಿದರು ಎಂದು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್

ಪೋಸ್ಟ್‌ನಲ್ಲಿರುವ ಆರೋಪಗಳಿಗೆ ಸಂಬಂಧಿಸಿ ಮಾಹಿತಿಗಾಗಿ ಹುಡುಕಿದಾಗ, ಶೂಟರ್ ಶೆಯಾಸಿ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿರುವ ಬಗ್ಗೆ ಪ್ರಕಟವಾದ ಹಲವಾರು ವರದಿಗಳು ಅಂತರ್ಜಾಲದಲ್ಲಿ ಕಂಡುಬಂದಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಈ ವರದಿಗಳಲ್ಲಿ ಶೂಟರ್ ಶ್ರೇಯಸಿ ಸಿಂಗ್ ಅವರನ್ನು ಮಾಜಿ ಕೇಂದ್ರ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಎಂದು ಉಲ್ಲೇಖಿಸಿದ್ದಾರೆ. ದಿಗ್ವಿಜಯ್ ಸಿಂಗ್ ಬಿಹಾರ ಮೂಲದ ರಾಜಕಾರಣಿ ಮತ್ತು ಜನತಾದಳ ಜೆಡಿಯು ಪಕ್ಷದ ಮಾಜಿ ನಾಯಕರಾಗಿದ್ದಾರೆ. ಅವರು ಚಂದ್ರಶೇಖರ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಸರ್ಕಾರಗಳ ಅಡಿಯಲ್ಲಿ ಕೇಂದ್ರ ಸಚಿವ ಸಂಪುಟ ಸದಸ್ಯರಾಗಿದ್ದರು.

ಹಿರಿಯ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರಿಗೆ ಶ್ರೇಯಾಸಿ ಸಿಂಗ್ ಎಂಬ ಹೆಸರಿನ ಮಗಳೆ ಇಲ್ಲ.

”ಅವರಿಗೂ ಶೂಟರ್‌ ಶ್ರೇಯಸಿಯೊಂದಿಗೆ ಯಾವುದೇ ಸಂಬಂಧವಿಲ್ಲ. ದಿಗ್ವಿಜಯ ಸಿಂಗ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಶ್ರೇಯಸಿ ಸಿಂಗ್‌ ತಮ್ಮ ಮಗಳಲ್ಲ ಮತ್ತು ಅವರ ಮಗಳು ಬಿಜೆಪಿಗೆ ಸೇರುವ ಈ ಎಲ್ಲಾ ಪ್ರತಿಪಾದನೆ ಸುಳ್ಳು ಎಂದು ಹೇಳಿದ್ದಾರೆ. ಅದರ ಕುರಿತು ಅವರ ಟ್ವೀಟ್ ಅನ್ನು ಸಹ ಇಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ ಶ್ರೇಯಾಸಿ ಸಿಂಗ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರ ಪುತ್ರಿ ಎಂದು ತಪ್ಪಾಗಿ ಚಿತ್ರಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...