Homeಮುಖಪುಟಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು - ಸಿದ್ದರಾಮಯ್ಯ

ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ

- Advertisement -
- Advertisement -

ಭಾರತ ಚೀನಾ ಗಡಿಯಲ್ಲಿ ಸೈನಿಕರ ಸಾಯುತ್ತಿರುವಾಗ ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದಿದ್ದಾರೆ.

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದು ಅವರು ತಿಳಿಸಿದ್ದಾರೆ.

ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್‌ನಾಥ್ ಸಿಂಗ್ ಅವರು ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂದು ಸಿದ್ದು ಆರೋಪಿಸಿದ್ದಾರೆ.

.@PMOIndia @narendramodi should answer the nation about the reality our soldiers are facing along LAC.On one hand…

Posted by Siddaramaiah on Wednesday, June 17, 2020

ನಮ್ಮ ಸೈನಿಕರು ವಾಸ್ತವಿಕ ಗಡಿ ರೇಖೆಯಲ್ಲಿ ಎದುರಿಸುತ್ತಿರುವ ವಾಸ್ತವತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿ ರಾಷ್ಟ್ರಕ್ಕೆ ಉತ್ತರಿಸಬೇಕು ಎಂದು ಸಿದ್ದು ಆಗ್ರಹಿಸಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಆರೋಗ್ಯ ತುರ್ತುಸ್ಥಿತಿಯನ್ನು ಪರಿಹರಿಸಲು ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಸೇನೆಯು ಒಳನುಗ್ಗುವಿಕೆಯ ವಿರುದ್ಧ ಹೋರಾಡುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚೀನಾ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಹೇಗೆ? ಯಶವಂತ್ ಸಿನ್ಹಾ ಪ್ರಶ್ನೆ 

ಇದನ್ನೂ ಓದಿ: ಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. I am not for or against BJP regarding this matter but Mr. Siddaramayya undoubtedly has no say in this matter… We have seen why he did when women in pink sarees sat on roads With innocent children day and night suffering for their rights….if he chose to remain silent and ignorant as a ruler then.. He better SHUT UP now…

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...