Homeಕರ್ನಾಟಕಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ: ಆರ್‌ ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

- Advertisement -
- Advertisement -

ನಮಸ್ತೆ ಟ್ರಂ‌ಪ್‌ಗಾಗಿ ಗುಜರಾತಿನ ಅಹಮದಾಬಾದ್‌ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ‌ಸಚಿವ ಪ್ರಿಯಾಂಕ್‌ ಖರ್ಗೆ ಆರ್.ಅಶೋಕ್ ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ. ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ” ಟೀಕಿಸಿದ್ದಾರೆ. 

“ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್‌ನ CEOಯಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ” ಎಂದು ತಿಳಿಸಿದ್ದಾರೆ.

“ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಕುಟುಕಿದ್ದಾರೆ.

ಆರ್‌ ಅಶೋಕ್‌ ಹೇಳಿದ್ದೇನು?

“ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದರು.

“ಈಗಲಾದರೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ” ಎಂದು ಪ್ರಶ್ನಿಸಿದ್ದರು.

“ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ನೀಡುತ್ತದೆಯೇ? ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ” ಎಂದು ಅಶೋಕ್ ಟೀಕಿಸಿದ್ದರು.

“ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ”‌ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...