Homeಮುಖಪುಟಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು...

ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

- Advertisement -
- Advertisement -

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ದಾಳಿಯಿಂದ ಜಗಜ್ಜಾಹೀರಾಗಿದೆ. ಆ ತನಿಖೆಗೆ ಸಹಕರಿಸಿದ ಉದ್ಯಮಿಯ ‘ಸ್ಮಾರ್ಟ್ ವಾಚ್’ ರೆಕಾರ್ಡಿಂಗ್ ಕುರಿತು ಕುತೂಹಲಕಾರಿ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದೆ.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟಿಡ್‌ನ ಅಧ್ಯಕ್ಷರೂ ಸಹ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು ಪುತ್ರ ಮಾಡಾಳ್ ಪ್ರಶಾಂತ್ ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ತಮ್ಮ ತಂದೆಯ ಹೆಸರಿನಲ್ಲಿ ಕೆಎಸ್‌ಡಿಎಲ್‌ಗೆ ಕಚ್ಛಾ ಸಾಮಾಗ್ರಿಗಳ ಪೂರೈಕೆ ಮಾಡುವ ಉದ್ಯಮಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಾಗ್ರಿಗಳ ಪೂರೈಕೆಗಾಗಿ 4.8 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ಟೆಂಡರ್ ಅನ್ನು ಜನವರಿ 23 ರಂದು ಹೊರಡಿಸಲಾಗಿತ್ತು. ಕೆಮಿಕ್ಸಿಲ್ ಕಾರ್ಪೊರೇಷನ್ ಕಂಪನಿಯ ಉದ್ಯಮಿ ಶ್ರೇಯಸ್ ಕಶ್ಯಪ್ ಎಂಬುವವರು ತಮ್ಮ ಮತ್ತು ತಮ್ಮ ಸಹವರ್ತಿ ಸಂಸ್ಥೆ ಡೆಲಿಸಿಯಾ ಕಾರ್ಪೊರೇಶನ್‌ ವತಿಯಿಂದ ಆ ಟೆಂಡರ್ ಪಡೆದುಕೊಂಡಿದ್ದರು. ಆ ಪ್ರಕಾರ ಕೆಎಸ್‌ಡಿಎಲ್‌ಗೆ 5,100 ಕೆಜಿ ಗ್ವಾಯಾಕ್‌ವುಡ್ ಎಣ್ಣೆ ಮತ್ತು 29,520 ಕೆಜಿ ಅಬ್ಬಲಿಡ್ ಅನ್ನು ಪೂರೈಕೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಪರ್ಚೇಸ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ ಒಟ್ಟು 1.2 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೇನು ಕೆಲವೆ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಿದ್ದು ನೀತಿ ಸಂಹಿತೆ ಜಾರಿಯಾದಲ್ಲಿ ತಮಗೆ ವರ್ಕ್ ಆರ್ಡರ್ ಸಿಗುವುದು ಕಷ್ಟ ಎಂದು ಆ ಉದ್ಯಮಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಈ ಕುರಿತು ಪ್ರಶಾಂತ್ ಮಾಡಾಳ್ ಅವರೊಂದಿಗೆ ಮಾತುಕತೆ ನಡೆಸಲು ಅವರು ಮುಂದಾಗಿದ್ದರು. ಮಾತುಕತೆ ಸಂದರ್ಭದಲ್ಲಿ ರೆಕಾರ್ಡಿಂಗ್‌ಗಳನ್ನು ತಡೆಯಲು ಬಿಗಿ ಭದ್ರತೆ ಮಾಡಿದ್ದರು. ಮೊಬೈಲ್ ಫೋನ್‌ಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಚೇರಿ ಒಳಗೆ ತರಲು ಬಿಡುತ್ತಿರಲಿಲ್ಲ. ಅಲ್ಲದೆ ಈ ವಿಷಯದ ಕುರಿತು ಮೆಸೇಜ್ ಮತ್ತು ವಾಟ್ಸಾಪ್ ಮಾಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಉದ್ಯಮಿ ಶ್ರೇಯಸ್ ಕಶ್ಯಪ್‌ರವರು ಫೆಬ್ರವರಿ ತಿಂಗಳಿನಲ್ಲಿ ಕೆಎಸ್‌ಡಿಎಲ್ ಪರ್ಚೆಸ್ ಆರ್ಡರ್ ಕುರಿತ ಪ್ರಶಾಂತ್ ಮಾಡಾಳ್‌ರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಲು ಟೆಕ್ನೋ ವ್ಯೂ ಸ್ಮಾರ್ಟ್-ವಾಚ್ ಅನ್ನು ಬಳಸಿದ್ದಾರೆ. ಆ ಎಲ್ಲಾ ರೆಕಾರ್ಡಿಂಗ್‌ಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನೊಂದಿಗೆ ಲಗತ್ತಿಸಿದ್ದಾರೆ. ಆ ನಂತರದ ಮಾತುಕತೆಯಲ್ಲಿ 1.2 ಕೋಟಿಯಿಂದ 81 ಲಕ್ಷ ರೂ ಲಂಚಕ್ಕೆ ಪ್ರಶಾಂತ್ ಮಾಡಾಳ್ ಒಪ್ಪಿಕೊಂಡಿದ್ದು, ಆರಂಭಿಕವಾಗಿ ಮಾರ್ಚ್ 2ರಂದು 40 ಲಕ್ಷ ರೂ ನೀಡುವಾಗಿ ಪ್ರಶಾಂತ್ ಮಾಡಾಳ್ ಮತ್ತು ಆತನ ಸಹಚರರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅಲ್ಲದೆ ಯಾವುದೇ ವ್ಯಾಪಾರದ ಅನುಭವವಿಲ್ಲದ ಪ್ರಶಾಂತ್ ಅವರ ಸ್ನೇಹಿತರು ನಡೆಸುತ್ತಿರುವ ಡಿಎಫ್‌ಎ ಸೋಪ್ ನೂಡಲ್ಸ್‌ನಂತಹ ಸಂಸ್ಥೆಗಳಿಗೆ ಶೇಕಡಾ 50 ಕ್ಕಿಂತ ಹೆಚ್ಚು ಲಾಭಾಂಶದಲ್ಲಿ ಇತರ ಕಚ್ಚಾ ವಸ್ತುಗಳ ಪೂರೈಕೆಯ ಗುತ್ತಿಗೆಯನ್ನು ಕೆಎಸ್‌ಡಿಎಲ್ ನೀಡಿದೆ. ಅವರು ಕಾನೂನು ಬಾಹಿರವಾಗಿ ಉಪ ಗುತ್ತಿಗೆ ನೀಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.


ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...