Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...