Homeಮುಖಪುಟಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ

ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯ ಪ್ರಾಂಶುಪಾಲೆ ಮತ್ತು ಹಿರಿಯ ವೈದ್ಯರೊಬ್ಬರು ಇಸ್ಲಾಮಿಕ್ ಪಂಥದ “ತಬ್ಲೀಘಿ ಜಮಾಅತ್” ಸದಸ್ಯರನ್ನು ಭಯೋತ್ಪಾದಕರು ಎಂದು ಉಲ್ಲೇಖಿಸಿ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ ಅವರನ್ನು ‘ಆಸ್ಪತ್ರೆಗಳ ಬದಲಾಗಿ ಕತ್ತಲಕೋಣೆಯಲ್ಲಿ ಕೂಡಿಹಾಕಬೇಕು ಅಥವಾ ಕಾಡುಗಳಿಗೆ ಅಟ್ಟಬೇಕು ಎಂದು ಕ್ಯಾಮರ ಎದುರೇ ಹೇಳಿದ್ದಾರೆ.

ಆರತಿ ಲಾಲ್‌ಚಂದಾನಿ ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾರ್ಚ್‌ನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ತಬ್ಲೀಘಿ ಜಮಾಅತ್ ಸದಸ್ಯರು ತನ್ನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಏಪ್ರಿಲ್‌ ತಿಂಗಳಿನಲ್ಲಿ ಅವರು ದುರ್ನಡತೆ ತೋರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸುಮ್ಮನೆ ಉಗುಳುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಮಾತುಕತೆಯನ್ನು ನಗರದ ಪತ್ರಕರ್ತರು ಕುಟುಕು ಕಾರ್ಯಾಚರಣೆಯಲ್ಲಿ ಚಿತ್ರೀಕರಿಸಿದ್ದಾರೆ. ಅದರಲ್ಲಿ ಪ್ರಾಂಶುಪಾಲರು “ನಾವು ಭಯೋತ್ಪಾದಕರಿಗೆ ವಿಐಪಿ ಚಿಕಿತ್ಸೆ ನೀಡುತ್ತಿದ್ದೇವೆ. ಅವರ ಕಾರಣದಿಂದಾಗಿ ಅನೇಕ ವೈದ್ಯರು ಸಂಪರ್ಕತಡೆಯಲ್ಲಿದ್ದಾರೆ. ಮುಖ್ಯಮಂತ್ರಿ (ಯೋಗಿ ಆದಿತ್ಯನಾಥ್) ಈ ಜನರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಒಲೈಕೆ ನೀತಿಯನ್ನು ಅನುಸರಿಸುತ್ತಿದ್ದಾರೆ. ಅವರನ್ನು ಜೈಲಿಗೆ ಹಾಕಬೇಕು” ಎಂದು ಅವರು ಹೇಳಿದ್ದಾರೆ.

ಮುಂದುವರಿದು ಅವರು “ಅವರನ್ನು ಕಾಡುಗಳಿಗೆ ಕಳುಹಿಸಿ, ಅವರನ್ನು ಕತ್ತಲಕೋಣೆಯಲ್ಲಿ ತಳ್ಳಿರಿ. ಈ 30 ಕೋಟಿ ಜನರಿಂದಾಗಿ 100 ಕೋಟಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರ ಕಾರಣದಿಂದಾಗಿ ಆರ್ಥಿಕ ತುರ್ತು ಪರಿಸ್ಥಿತಿ ಇದೆ.” ಎಂದು ಹೇಳಿದ್ದಾರೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಅವರ ವಿರುದ್ಧ ತೀವ್ರ ಟೀಕೆ ಎದುರಾಗಿದೆ. ನಂತರ ಅವರು ನಾನು ಹಾಗೆ ಹೇಳಿಲ್ಲ, ಅದು ತಿರುಚಿರುವ ವಿಡಿಯೋ. ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯಾರೋ ಮಾಡಿರುವ ಪಿತೂರಿ ಎಂದು ಮಾತು ಬದಲಿಸಿದ್ದಾರೆ. ನಾನು ಯಾವುದೇ ಸಮುದಾಯದ ಹೆಸರಿಡಿದು ಮಾತನಾಡಿಲ್ಲ, ನಾನು ಆ ಸಮುದಾಯವನ್ನು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ಕಾನ್ಪುರ ಮೂಲದ ಮಾಜಿ ಸಂಸದೆ ಮತ್ತು ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯೆ ಸುಭಾಶಿನಿ ಅಲಿಯವರು ಪ್ರಾಂಶುಪಾಲೆ ವಿರುದ್ಧ ಕಿಡಿಕಾರಿದ್ದಾರೆ. ಅವರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ. “ಇದು ಅಸಂವಿಧಾನಿಕವಾಗಿದ್ದು ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ಕೂಡಲೇ ಈ ವೀಡಿಯೊವನ್ನು ತನಿಖೆ ಮಾಡಬೇಕು ಮತ್ತು ಅದು ನಿಜವೆಂದು ಕಂಡುಬಂದಲ್ಲಿ ಪ್ರಾಂಶುಪಾಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವುತ್ತು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...