Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...