ಈ ವರ್ಷದ ಜೂನ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಗಿನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 37 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಆರ್‌ಟಿಐ ಮೂಲಕ ತಿಳಿದು ಬಂದಿದೆ.
ಜೂನ್ 27ರಂದು ನಡೆದ ಈ ಕಾರ್ಯಕ್ರಮದಲ್ಲಿ ‘ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗಿತ್ತು. ಪ್ರಧಾನಿ ಮೋದಿಯವರ ರಾಜಕೀಯ ಪಯಣವನ್ನು ವಿವರಿಸುವ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದು ಅನೇಕ ರಾಜಕೀಯ ನಾಯಕರು ಭಾಗವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಆರ್‌ಟಿಐ ಕಾರ್ಯಕರ್ತ ಭೀಮನಗೌಡ ಪರಗೊಂಡ ಅವರು ಪಡೆದ ಆರ್‌ಟಿಐ ಉತ್ತರದಲ್ಲಿ, ಮೂರು ಗಂಟೆಗಳ ಕಾರ್ಯಕ್ರಮದ ಡಿಜಿಟಲ್ ಮೀಡಿಯಾ ನಿರ್ವಹಣೆಗೆ ಎಂದು 12,38,674 (12 ಲಕ್ಷದ 38 ಸಾವಿರದ 674) ರೂ. ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ
ಹೆಚ್ಚುವರಿಯಾಗಿ 100mbps ಲೀಸ್ ಲೈನ್ ಇಂಟರ್ನೆಟ್ ವೇಗವನ್ನು ಒದಗಿಸಲು 1,10,000 (1 ಲಕ್ಷದ 10 ಸಾವಿರ) ರೂ. ಗಳನ್ನು ಖರ್ಚು ಮಾಡಲಾಗಿದೆ ಎಂದು ಅದು ಹೇಳಿದೆ.
ಇಷ್ಟೆ ಅಲ್ಲದೆ, ಮೂರು ಗಂಟೆಗಳ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮವನ್ನು ಸಾಮಾಜಿಕ ಮಾಧ್ಯಮಗಳ ವೇದಿಕೆಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲು 95 ಸಾವಿರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಉತ್ತರದಲ್ಲಿ ಹೇಳಲಾಗಿದೆ. ಕಾರ್ಯಕ್ರಮದ ವ್ಯವಸ್ಥೆ ಕಲ್ಪಿಸಲು 24,67,958(24 ಲಕ್ಷದ 67 ಸಾವಿರದ 958) ರೂ. ಖರ್ಚು ಮಾಡಲಾಗಿದೆ.
‘ಮೋದಿ@20, ಡ್ರೀಮ್ಸ್ ಮೀಟ್ ಡೆಲಿವರಿ’, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ರಾಜಕೀಯ ಜೀವನದ ಬಗ್ಗೆ ಬರೆದ ಲೇಖನಗಳ ಸಂಗ್ರಹವಾಗಿದೆ. ಜೂನ್ 27 ರಂದು ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!
ಇದೇ ಪುಸ್ತಕವನ್ನು ಗೃಹ ಸಚಿವ ಅಮಿತ್ ಶಾ ಅವರು ಒಡಿಶಾದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಚೆನ್ನೈನಲ್ಲಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೈದರಾಬಾದ್‌ನಲ್ಲಿ ಪುಸ್ತಕವನ್ನು ಬಿಡುಗಡೆ ಮಾಡುವ ಮೂಲಕ ದೇಶಾದ್ಯಂತ ಇದೇ ರೀತಿ ಪುಸ್ತಕ ಬಿಡುಗಡೆಯನ್ನು ಮಾಡಲಾಗಿತ್ತು.


