Homeಕರ್ನಾಟಕ3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ...

3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

- Advertisement -
- Advertisement -

ಈ ವರ್ಷದ ಜೂನ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಗಿನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 37 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಆರ್‌ಟಿಐ ಮೂಲಕ ತಿಳಿದು ಬಂದಿದೆ.

ಜೂನ್ 27ರಂದು ನಡೆದ ಈ ಕಾರ್ಯಕ್ರಮದಲ್ಲಿ ‘ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗಿತ್ತು. ಪ್ರಧಾನಿ ಮೋದಿಯವರ ರಾಜಕೀಯ ಪಯಣವನ್ನು ವಿವರಿಸುವ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದು ಅನೇಕ ರಾಜಕೀಯ ನಾಯಕರು ಭಾಗವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಟಿಐ ಕಾರ್ಯಕರ್ತ ಭೀಮನಗೌಡ ಪರಗೊಂಡ ಅವರು ಪಡೆದ ಆರ್‌ಟಿಐ ಉತ್ತರದಲ್ಲಿ, ಮೂರು ಗಂಟೆಗಳ ಕಾರ್ಯಕ್ರಮದ ಡಿಜಿಟಲ್ ಮೀಡಿಯಾ ನಿರ್ವಹಣೆಗೆ ಎಂದು 12,38,674 (12 ಲಕ್ಷದ 38 ಸಾವಿರದ 674)  ರೂ. ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಹೆಚ್ಚುವರಿಯಾಗಿ 100mbps ಲೀಸ್ ಲೈನ್‌ ಇಂಟರ್ನೆಟ್ ವೇಗವನ್ನು ಒದಗಿಸಲು 1,10,000 (1 ಲಕ್ಷದ 10 ಸಾವಿರ) ರೂ. ಗಳನ್ನು ಖರ್ಚು ಮಾಡಲಾಗಿದೆ ಎಂದು ಅದು ಹೇಳಿದೆ.

ಇಷ್ಟೆ ಅಲ್ಲದೆ,  ಮೂರು ಗಂಟೆಗಳ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮವನ್ನು ಸಾಮಾಜಿಕ ಮಾಧ್ಯಮಗಳ ವೇದಿಕೆಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲು 95 ಸಾವಿರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಉತ್ತರದಲ್ಲಿ ಹೇಳಲಾಗಿದೆ. ಕಾರ್ಯಕ್ರಮದ ವ್ಯವಸ್ಥೆ ಕಲ್ಪಿಸಲು 24,67,958(24 ಲಕ್ಷದ 67 ಸಾವಿರದ 958) ರೂ. ಖರ್ಚು ಮಾಡಲಾಗಿದೆ.

‘ಮೋದಿ@20, ಡ್ರೀಮ್ಸ್ ಮೀಟ್ ಡೆಲಿವರಿ’, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ರಾಜಕೀಯ ಜೀವನದ ಬಗ್ಗೆ ಬರೆದ ಲೇಖನಗಳ ಸಂಗ್ರಹವಾಗಿದೆ. ಜೂನ್ 27 ರಂದು ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಇದೇ ಪುಸ್ತಕವನ್ನು ಗೃಹ ಸಚಿವ ಅಮಿತ್ ಶಾ ಅವರು ಒಡಿಶಾದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಚೆನ್ನೈನಲ್ಲಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೈದರಾಬಾದ್‌ನಲ್ಲಿ ಪುಸ್ತಕವನ್ನು ಬಿಡುಗಡೆ ಮಾಡುವ ಮೂಲಕ ದೇಶಾದ್ಯಂತ ಇದೇ ರೀತಿ ಪುಸ್ತಕ ಬಿಡುಗಡೆಯನ್ನು ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...