Homeಕರ್ನಾಟಕಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ

ಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ಶಹಭಾಸ್ ಗಿರಿ ಪಡೆದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಪ್ರತಿದಿನ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಕೊರೊನಾ ನಿಯಂತ್ರಣದ ವೈಫಲ್ಯಗಳ ಸರಣಿ ವರದಿಗಳನ್ನೂ ಅವರಿಗೆ ತೋರಿಸಿದ್ದರೆ ಇನ್ನಷ್ಟು ಶಹಭಾಸ್ ಅನ್ನುತ್ತಿದ್ದರೋ ಏನೋ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ನೆರವು ನೀಡುತ್ತೀರಿ ಎಂದು ನರೇಂದ್ರ ಮೋದಿಯವರನ್ನು ಕೇಳಬೇಕಿತ್ತಲ್ಲವೇ? PMCares ನಿಧಿಯಿಂದ ರಾಜ್ಯಕ್ಕೆ ಎಷ್ಟು ದುಡ್ಡು ಕಳಿಸಿದ್ದೀರಿ ಎಂದು ಪ್ರಧಾನಿಗಳನ್ನು ವಿಚಾರಿಸಬೇಕಿತ್ತಲ್ಲವೇ? ಸುಳ್ಳು ಆಶ್ವಾಸನೆ ನೀಡಿದ್ದರೂ ನೊಂದ ಜನರಿಗೆ ಸ್ವಲ್ಪ‌ ನೆಮ್ಮದಿ ಸಿಗುತ್ತಿತ್ತು ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

ಬೆಂಗಳೂರಿನಲ್ಲಿ COVID19 ನಿಯಂತ್ರಣಕ್ಕೆ ತ್ರಿಮೂರ್ತಿ ಸಚಿವರನ್ನು ನೇಮಿಸಿರುವುದು ಸೋಂಕಿತರಿಗೆ ನೆರವಾಗಲಿಕ್ಕಾ? ಇಲ್ಲವೇ, ಭಿನ್ನಾಭಿಪ್ರಾಯವನ್ನು ಶಮನ ಮಾಡಲಿಕ್ಕಾ? ಸೃಷ್ಟಿ, ಪಾಲನೆ, ಲಯ ಇವು ಆ ತ್ರಿಮೂರ್ತಿಗಳ ಕರ್ತವ್ಯವಂತೆ. ಈ ಮೂವರು ಇವುಗಳಲ್ಲಿ ಯಾವ ಕೆಲಸ ಮಾಡಲಿದ್ದಾರಂತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವೈದ್ಯಕೀಯ ಸಚಿವ ಸುಧಾಕರ್ ಮತ್ತು ಸಚಿವ ಆರ್ ಅಶೋಕ್‌ರವರನ್ನು ಮುಖ್ಯಮಂತ್ರಿಗಳು ಬೆಂಗಳೂರು ಕೊರೊನಾ ನಿರ್ವಹಣೆಗೆಂದು ನೇಮಿಸಿರುವುದನ್ನು ಅವರಲ್ಲಿನ ಭಿನ್ನಾಭಿಪ್ರಾಯ ಶಮನಕ್ಕೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಹಲವು ಪತ್ರಿಕೆಗಳ ವರದಿಗಳನ್ನು ಉಲ್ಲೇಖಿಸಿರುವ ಅವರು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ್ದಾರೆ.

ಲೂಟಿ ಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ B ಶ್ರೀರಾಮುಲು
ಸವಾಲು ಹಾಕಿದ್ದಾರೆ. ರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...