Homeಕರ್ನಾಟಕಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಅನುಮತಿ ನಿರಾಕರಿಸಿದ ಸಾಹಿತಿಗಳ ಪಠ್ಯ ಬೋಧಿಸದಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು

- Advertisement -
- Advertisement -

ಪಠ್ಯ ಪುಸ್ತಕಗಳ ಮರು-ಪರಿಸ್ಕರಣೆಯ ಹೆಸರಲ್ಲಿ ನಡೆದ ಕೇಸರೀಕರಣದ ವಿರುದ್ಧದ ಪ್ರತಿಭಟನೆಯಾಗಿ, ನಾಡಿನ ಖ್ಯಾತ ಸಾಹಿತಿಗಳು ಪಠ್ಯದಲ್ಲಿ ಸೇರಿಸಲಾಗಿದ್ದ ತಮ್ಮ ಸಾಹಿತ್ಯಕ್ಕೆ ಅನುಮತಿ ನಿರಾಕರಿಸಿದ್ದರು. ಶುಕ್ರವಾರ ರಾಜ್ಯ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿ ಅವುಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸಲು ಹೇಳಿದೆ.

ಬಿಜೆಪಿ ಪರ ಟ್ರೋಲರ್‌ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಮರು-ಪರಿಷ್ಕರಣೆಯ ನಂತರ, ಕೇಸರೀಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ಕೂಡಾ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ಸಮಯದಲ್ಲಿ ನಾಡಿನ ಹಲವಾರು ಪ್ರಸಿದ್ಧ ಸಾಹಿತಿಗಳು ಪಠ್ಯ ಪುಸ್ತಕಗಳಲ್ಲಿ ತಮ್ಮ ಬರಹಗಳನ್ನು ಅಳವಡಿಸಲು ನೀಡಿದ್ದ ಅನುಮತಿಯನ್ನು ನಿರಾಕರಿಸಿದ್ದರು. ಕೇಂದ್ರ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ದೇವನೂರು ಮಹಾದೇವ, ಡಾ.ಜಿ. ರಾಮಕೃಷ್ಣ, ರೂಪಾ ಹಾಸನ, ಈರಪ್ಪ ಎಂ. ಕಂಬಳಿ, ಸತೀಶ್ ಕುಲಕರ್ಣಿ, ಸುಕನ್ಯೆ ಮಾರುತಿ, ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ತಮ್ಮ ಸಾಹಿತ್ಯಗಳನ್ನು ಸೇರಿಸದಂತೆ ಸರ್ಕಾರಕ್ಕೆ ಪತ್ರ ಬರೆದು ಕೇಳಿಕೊಂಡಿದ್ದರು.

ಇದರ ನಂತರ ರಾಜ್ಯ ಸರ್ಕಾರವು ಸಾಹಿತಿಗಳಿಗೆ ಪತ್ರ ಬರೆದು ತಮ್ಮ ನಿರ್ಧಾವನ್ನು ಬದಲಿಸುವಂತೆ ಮತ್ತು ಅವರ ಸಾಹಿತ್ಯಗಳನ್ನು ಶಾಲಾ ಪಠ್ಯಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೇಳಿಕೊಂಡಿತ್ತು. ಆದರೆ ಸಾಹಿತಿಗಳು ಕೇಸರಿಕರಣದ ವಿರುದ್ಧ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದು, ಅನುಮತಿ ನೀಡುವುದಿಲ್ಲ ಎಂದು ಮರುಪತ್ರ ಬರೆದಿದ್ದರು.

ಇದನ್ನೂ ಓದಿ: ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಇದರ ನಂತರ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’, ಡಾ.ಜಿ. ರಾಮಕೃಷ್ಣ ಅವರ ‘ಭಗತ್‌ ಸಿಂಗ್‌’, ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’, ಈರಪ್ಪ ಎಂ. ಕಂಬಳಿ ಅವರ ‘ಹೀಗೊಂದು ಟಾಪ್ ಪ್ರಯಾಣ’, ಸತೀಶ್ ಕುಲಕರ್ಣಿ ಅವರ ‘ಕಟ್ಟತೇವ ನಾವು’, ಸುಕನ್ಯ ಮಾರುತಿ ಅವರ ‘ಏಣಿ’ ಹಾಗೂ ದೊಡ್ಡಹುಲ್ಲೂರು ರುಕ್ಕೋಜಿ ರಾವ್‌ ಅವರು ಬರೆದಿರುವ ‘ಡಾ. ರಾಜ್‌ಕುಮಾರ್‌’ ಅವರು ಪಠ್ಯಗಳನ್ನು ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಾಲೆಗಳಿಗೆ ಸೂಚಿಸುವಂತೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಡ್ಡಿ ಗಳಿಗೆ ಅದೇ ಬೇಕಾಗಿರೋದು
    ಮುಂದಿನ ತಲೆಾರುಗಳನ್ನು ದೇವರೇ ಕಾಪಾಡಬೇಕು

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...