Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ- ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” (ಗೋಹತ್ಯೆ ನಿಷೇಧ ಮಸೂದೆ)ಗೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲಾಗಿದೆ. ಸುಗ್ರೀವಾಜ್ಞೆಯ ಅಂಕಿತಕ್ಕೆ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಪ್ರಸ್ತುತ ಮಸೂದೆ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್ತಿನಲ್ಲಿ ಅದಕ್ಕೆ ತಡೆಯಾಗಿತ್ತು. ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದ್ದು, “ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನನ್ನೂ ಕೂಡಾ ಜಾರಿಗೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

ಡಿಸಂಬರ್ 28 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು, “ಮಸೂದೆಯು ಕಾನೂನಾಗಿ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಅಲ್ಲದೆ ಚರ್ಮೋದ್ಯಮಕ್ಕೂ ಈ ಕಾಯ್ದೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

“ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ 1964ರ ಕಾಯ್ದೆಯಲ್ಲಿ ಲೋಪಗಳಿದ್ದ ಹಿನ್ನೆಲೆ, ಕೆಲ ತಿದ್ದುಪಡಿ ಮಾಡಲಾಗಿದೆ. 1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ. ದನದ ಮಾಂಸ ತಿನ್ನುವುದಕ್ಕೆ ನಾವು ಯಾವುದೇ ನಿಷೇಧವನ್ನು ಹೇರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“1964 ರ ಕಾಯ್ದೆಯಲ್ಲಿ ಜಾನುವಾರುಗಳ ಹತ್ಯೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಅವಕಾಶವಿರಲಿಲ್ಲ. ಇದೀಗ ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ. ಹಳೆಯ ಕಾನೂನು ಬಿಗಿಯಾಗಿರಲಿಲ್ಲ. ಈಗಿನ ಕಾಯ್ದೆಯಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಿದರೆ ಅದನ್ನು ವಶಕ್ಕೆ ಪಡೆಯಲಾಗುವುದು. ಅಲ್ಲದೆ, ವಾಹನವನ್ನು ಬ್ಯಾಂಕ್ ಗ್ಯಾರಂಟಿ ಮೂಲಕ ಹಿಂಪಡೆಯಬಹುದು” ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...