Homeಕರ್ನಾಟಕಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಚಾಲಕ ಸೇರಿದಂತೆ, ಮುಂಭಾಗದ ಸೀಟಿನಲ್ಲಿರುವವರು ಮತ್ತು ಹಿಂಭಾಗದ ಸೀಟುಗಳ ಕಾರು ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಪೊಲೀಸ್ ಇಲಾಖೆಯು ಮೆಮೊ ಹೊರಡಿಸಿದ್ದು, ತಪ್ಪಿದಲ್ಲಿ ರೂ 1000 ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ.

ಹೊಸ ನಿಯಮವೂ M1 ವರ್ಗದ ಮೋಟಾರು ವಾಹನಗಳಿಗೆ ಅನ್ವಯವಾಗಲಿದೆ. ಚಾಲಕನ ಸೀಟಿಗೆ ಹೆಚ್ಚುವರಿಯಾಗಿ ಎಂಟು ಸೀಟುಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ಮೋಟಾರು ವಾಹನಗಳನ್ನು M1 ವರ್ಗದ ವಾಹನಗಳು ಎಂದು ವರ್ಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

M1 ವರ್ಗದ ಕಾರುಗಳಲ್ಲಿ ಎಸ್‌ಯುವಿಗಳು, ಎಂಯುವಿಗಳು, ಹ್ಯಾಚ್‌ಬ್ಯಾಕ್‌ಗಳು, ಸೆಡಾನ್‌ಗಳು ಹಾಗೂ ಇತ್ಯಾದಿ ಕಾರುಗಳು ಸೇರಿವೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ರಸ್ತೆ ಸುರಕ್ಷತೆ) ಆರ್. ಹಿತೇಂದ್ರ ಅವರು ರಾಜ್ಯದ ಎಲ್ಲಾ ಪೊಲೀಸ್ ಕಮಿಷನರೇಟ್‌ಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿಯಮವನ್ನು ಜಾರಿಗೊಳಿಸಲು ಅಕ್ಟೋಬರ್ 18ರ ಮಂಗಳವಾರ ಆದೇಶವನ್ನು ಹೊರಡಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ನಿರ್ದೇಶನವನ್ನು ಆದೇಶವು ಉಲ್ಲೇಖಿಸಿದೆ. ಸೆಪ್ಟೆಂಬರ್ 19 ರ ಒಕ್ಕೂಟ ಸರ್ಕಾರದ ಆದೇಶವು ಮೋಟಾರು ವಾಹನ ಕಾಯಿದೆ-1988 ರ ಸೆಕ್ಷನ್ 194B ಅಡಿಯಲ್ಲಿ ಸೀಟ್ ಬೆಲ್ಟ್‌ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸುತ್ತದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳು-1989 ರ ನಿಯಮ 125 (1) ಎಲ್ಲಾ ಕಾರುಗಳು ಸೀಟ್ ಬೆಲ್ಟ್ ಹೊಂದಿರಬೇಕು ಎಂದು ಹೇಳುತ್ತದೆ.

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಸಾವಿನ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಈ ಆದೇಶ ಹೊರಬಿದ್ದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ವರದಿಯಾಗಿತ್ತು.

ಇದನ್ನೂ ಓದಿ: ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ಸುರಕ್ಷತಾ ಬೆಲ್ಟ್‌ಗಳ ಬಳಕೆಯನ್ನು ಕಡ್ಡಾಯಗೊಳಿಸುವ ಮೋಟಾರು ವಾಹನ ಕಾಯಿದೆ-1988 ರ ಸೆಕ್ಷನ್ 194B ಅಡಿಯಲ್ಲಿ, “ಸೀಟ್ ಬೆಲ್ಟ್ ಧರಿಸದೆ ಮೋಟಾರು ವಾಹನವನ್ನು ಚಾಲನೆ ಮಾಡುವವರು ಅಥವಾ ಸುರಕ್ಷತಾ ಬೆಲ್ಟ್ ಧರಿಸದ ಪ್ರಯಾಣಿಕರನ್ನು ಸಾಗಿಸುವವರಿಗೆ 1000 ರೂ. ದಂಡ ವಿಧಿಸಲಾಗುತ್ತದೆ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...