Homeಕರ್ನಾಟಕಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ ಆದೇಶ

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ ಆದೇಶ

ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಟ ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ.

- Advertisement -
- Advertisement -

ಕಂದಾಯ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಬ್ರಾಹ್ಮಣ ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಲಭ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶಕ್ಕೆ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಇದರೊಂದಿಗೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಟ ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ


ಓದಿ: ಮೀಸಲಾತಿಯ ಕುರಿತ ಸುಪ್ರೀಂ ತೀರ್ಪು ಅಪಾಯಕಾರಿಯಾದುದು.


ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ’’ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಇದರಂತೆ ಬ್ರಾಹ್ಮಣ ಸಮುದಾಯಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವುದಕ್ಕೆ ಕೆಲ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿಕೊಂಡು ದೃಢೀಕರಣ ಪತ್ರಗಳನ್ನು ವಿತರಿಸಬಹುದಾಗಿದೆ.

ರಾಜ್ಯದ ಬ್ರಾಹ್ಮಣ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.


ಓದಿ: ಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ ಗೊತ್ತೇನು?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕರ್ನಾಟಕದಲ್ಲಿ ಈಗ ಮೀಸಲಾತಿಗೆ ಒಳಪಟ್ಟಿರದ
    casteಗಳು ಯಾವುವು?
    ಈ ಶೇ. ೧೦ ರ ಮೀಸಲಾತಿ ಪಟ್ಟಿಗೆ ಬರುವ caste ಗಳಾವು?

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...