Homeಕರ್ನಾಟಕದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯ ಸರ್ಕಾರವು ನವೆಂಬರ್ 5 ರ ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ‘ಗೋ ಪೂಜೆ’ ಮಾಡಲು ಆದೇಶಿಸಿದೆ. ಹಿಂದೂ ಪಂಚಾಂಗದ ಪ್ರಕಾರ ‘ಗೋಧೂಳಿ ಲಗ್ನ’ದ ಶುಭ ಮುಹೂರ್ತದಲ್ಲಿ ಬರುವ ‘ಬಲಿಪಾಡ್ಯಮಿ’ಯಂದು ಸಂಜೆ 5:30 ರಿಂದ 6:30 ರವರೆಗೆ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ನಡೆಸುವಂತೆ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಆದೇಶವು ನಿರ್ದೇಶಿಸುತ್ತದೆ.

ಆದೇಶದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಹಸುಗಳಿಗೆ ಸ್ನಾನ ಮಾಡಿಸಿ, ಹೂವುಗಳಿಂದ ಅಲಂಕರಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿ ಬಾಳೆಹಣ್ಣು, ಬೆಲ್ಲ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳನ್ನು ಅರ್ಪಿಸಿ ಪೂಜೆ ನಡೆಸಬೇಕಾಗಿದೆ.

ಇದನ್ನೂ ಓದಿ: ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ‘ಗೋ ಪೂಜೆ’ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದಿಂದ ದೀಪಾವಳಿ ಸಂದರ್ಭದಲ್ಲಿ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

“ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ. ಶ್ರೀಮದ್‌ ಭಗವದ್ಗೀತೆ, ಭಾಗವತ ಮಹಾಪುರಾಣ, ಮುಂತಾದ ಪುರಾಣಗಳಲ್ಲಿ ಗೋವುಗಳ ಮಹತ್ವಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣುತ್ತೇವೆ. ಹಾಗೆಯೇ; ಅನಾದಿಕಾಲದಿಂದಲೂ ಹಿಂದೂ ಧರ್ಮದವರು ಭಾರತ ದೇಶದಲ್ಲಿ ಗೋಮಾತೆಯನ್ನು ಕಾಲ ಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ” ಎಂದು ಆದೇಶವು ಹೇಳುತ್ತದೆ.

“ಹಿಂದೂಗಳು ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೊವೂಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ. ಸಿಹಿ ತಿನಿಸುಗಳನ್ನು ನೀಡಿ /ಕೊಟ್ಟು ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಷೂಜೆಯನ್ನು /ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ” ಎಂದು ಅದು ತಿಳಿಸಿದೆ.

“ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆಯೆಂದು ತಿಳಿದು ಪೂಜಿಸುವ ಸಂಪ್ರದಾಯ/ ಪದ್ದತಿ ಬಿಡಬಾರದೆಂಬ ದೃಷ್ಠಿಯಿಂದ, ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸತ್ಸಂಪ್ರದಾಯ ಮುಂದುವರೆಸುವ ದೃಷ್ಠಿಯಿಂದ ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ /ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ, ಸನಾತನ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು, ಸಂಪ್ರಾದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ /ಬಲಿಪಾಡ್ಯಮಿಯ ಹಬ್ಬದ ದಿನದಂದು ‘ಗೋ ಪೂಜೆ’ ನೆಡೆಸಿ ಜಾರಿಗೊಳಿಸುವುದು ಸೂಕ್ತವು, ಶಾಸ್ತ್ರ ಸಮೃತವು ಆಗಿರುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...