HomeಮುಖಪುಟRSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

RSS ಕಾರ್ಯಕರ್ತರ ಮೇಲಿನ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -
- Advertisement -

ಕೆಲವು ವಿಶೇಷ ಸಂದರ್ಭಗಳಲ್ಲಿ ಅನಿವಾರ್ಯ ಎನಿಸಿಕೊಂಡ ಕೆಲವು ಪ್ರಕರಣಗಳನ್ನು ರಾಜ್ಯ ಸರ್ಕಾರ ಅಭಿಯೋಜನೆಯಿಂದ ಹಿಂಪಡೆಯುವುದು ತೀರಾ ಸಾಮಾನ್ಯ ವಿಚಾರ. ಇದಕ್ಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಉದಾಹರಣೆಗಳಿವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 46 ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಿಎಂ ಯಡಿಯೂರಪ್ಪ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಬಹುತೇಕ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಕರಣಗಳು ಎಂಬುದು ಉಲ್ಲೇಖಾರ್ಹ.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ, ಅಭಿಯೋಗ-ಸರ್ಕಾರಿ ವ್ಯಾಜ್ಯಗಳ ಇಲಾಖೆ ಮತ್ತು ಕಾನೂನು ಇಲಾಖೆ ಈ ಎಲ್ಲಾ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸರಿಯಲ್ಲ, ಇವು ಹಿಂಪಡೆಯಲು ಅರ್ಹವಲ್ಲದ ಪ್ರಕರಣವಾಗಿವೆ ಎಂದು ಅಭಿಪ್ರಾಯಪಟ್ಟಿವೆ. ಆದರೂ ಸಹ ಈ ಅಭಿಪ್ರಾಯಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರ ಎಲ್ಲಾ ಪ್ರಕರಣಗಳನ್ನೂ ಹಿಂಪಡೆದಿವೆ. ಸರ್ಕಾರ ಹಿಂಪಡೆದಿರುವ ಈ ಎಲ್ಲಾ ಪ್ರಕರಣಗಳು ಹಿಂದುತ್ವಪರ ಸಂಘಟನೆಗಳ ವಿರುದ್ಧದ ಪ್ರಕರಣಗಳೆ ಆಗಿರುವುದು ಮತ್ತೊಂದು ವಿಶೇಷ.

ಬಿಜೆಪಿ ಸರ್ಕಾರದ ಈ ನಡೆ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ನೀಡುವಂತಿದೆ. ನ್ಯಾಯ ವ್ಯವಸ್ಥೆಯನ್ನೇ ಅಣಕ ಮಾಡುವಂತಿದೆ. ಇಂತಹ ಬೆಳವಣಿಗೆಯಿಂದ ಶಾಂತಿ ಮತ್ತು ಸೌಹಾರ್ದತೆಗೆ ಭಾರೀ ಅಪಾಯ ಎದುರಾಗಲಿದೆ. ಸಮಾಜ ಘಾತುಕ ಕೆಲಸಗಳಿಗೆ ಪ್ರೇರಣೆಯಾಗಲಿದೆ. ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗುವವರಿಗೆ ಯಾವುದೇ ಭಯ ಇಲ್ಲದಂತಾಗುತ್ತದೆ ಎಂದು ಕೆಲವು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದರೂ ಸಹ, ಇದ್ಯಾವುದಕ್ಕೂ ಕ್ಯಾರೇ ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಈ ಮೂಲಕ ಸಮಾಜದಲ್ಲಿ ಮತ್ತೆ ಅರಾಜಕ ಸನ್ನಿವೇಶ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಖುಲಾಸೆಗೊಳಿಸಲಾಗಿರುವ ಪ್ರಕರಣಗಳ ವಿವರ

1) ಟಿಪ್ಪು ಜಯಂತಿಯನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ ಯಾವುದೇ ಅನುಮತಿ ಪಡೆಯದೆ ಸುಮಾರು 500ಕ್ಕೂ ಹೆಚ್ಚು ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಲ್ಲದೆ ಕೋಮು ದ್ವೇಷ ಹುಟ್ಟಿಸುವ ಪ್ರಚೋಧನಾಕಾರಿ ಭಾಷಣ ಮಾಡಿದ್ದರು.

2) 2015ರಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಪೇದೆ ಜಯಣ್ಣ ರೌಂಡ್ಸ್‌ನಲ್ಲಿದ್ದಾಗ, ಸ್ಥಳೀಯ ಬಜರಂಗದಳ ಮುಖಂಡರಾದ ಪಾರ್ಥಸಾರಥಿ ತನ್ನ 10-15 ಜನ ಹಿಂಬಾಲಕರ ಜೊತೆಗೆ ಕೈನಲ್ಲಿ ಮಚ್ಚು ಮತ್ತು ದೊಣ್ಣೆ ಹಿಡಿದು ಪೆನ್ಷನ್ ಮೊಹಲ್ಲಾ ಸರ್ಕಲ್‌ನಲ್ಲಿ ತಿರುಗಾಡಿದ್ದರು. ಅಲ್ಲದೆ, ಈ ವೇಳೆ ಅವಾಚ್ಯ ಶಬ್ಧಗಳಿಂದ ಮುಸ್ಲಿಮರನ್ನು ನಿಂದಿಸುವ ಮೂಲಕ ಸ್ಥಳದಲ್ಲಿ ಕೋಮುದ್ವೇಷ ಮತ್ತು ಮತೀಯ ಭಾವನೆ ಕೆರಳಿಸಲು ಪ್ರಯತ್ನಿಸಿದ್ದರು.

3) 2015ರಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಸಲುವಾಗಿ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪಕ್ಷದವರು ಅಕ್ರಮ ಕೂಟ ರಚಿಸಿಕೊಂಡು ಕೊಡಗಿನ ಜಿ.ಟಿ. ವೃತ್ತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

4) 2017ರಲ್ಲಿ ಕೊಡಗಿನಲ್ಲಿ ಪ್ರತಿಭಟನೆಗೆ ಅನುಮತಿ ಇಲ್ಲದೆ ಟಿಪ್ಪು ಜಯಂತಿ ವಿರೋಧಿಸಿ ನೂರಾರು ಜನ ಪ್ರತಿಭಟಿಸಿದ್ದರು. ಇವರೆಲ್ಲರನ್ನೂ ಬಂಧಿಸಲಾಗಿತ್ತು. ಆದರೆ, ಇವರನ್ನು ಬಂಧಿಸಿ ಪೊಲೀಸ್ ಇಲಾಖೆ ವಾಹನಕ್ಕೆ ಹತ್ತಿಸುವಾಗ ಆರೋಪಿಗಳು ವಾಹನದ ವೈರಿಂಗ್ ಅನ್ನು ಕಿತ್ತು ಹಾಕಿದ್ದರು. ಅಲ್ಲದೆ, ರಾತ್ರಿ 11.30ಕ್ಕೆ ಬಾಳೆಕಾಯಿ ಶ್ರೀನಿವಾಸ ಎಂಬ ವ್ಯಕ್ತಿ ಅಕ್ರಮ ಗುಂಪು ಕಟ್ಟಿಕೊಂಡು ಪೊಲೀಸ್ ಠಾಣೆಗೆ ಕಲ್ಲು ಹೊಡೆದು ಗಾಜುಗಳನ್ನು ಪುಡಿ ಮಾಡಿದ್ದರು. ಸರ್ಕಾರಿ ಆಸ್ತಿಗೆ ನಷ್ಟ ಉಂಟು ಮಾಡುವ ಮೂಲಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದರು.

5) 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪರೇಶ್ ಮೆಹ್ತಾ ಎಂಬ ವ್ಯಕ್ತಿಯ ಸಾವಿನ ಮೆರವಣಿಗೆ ಮಾಡುತ್ತಿರುವಾಗ ಕೆಲ ಜನರ ಗುಂಪು ಮುಸ್ಲಿಂ ಸಮಾಜದವರ ವಿರುದ್ಧ ದಿಕ್ಕಾರ ಕೂಗುತ್ತಾ ಬಂದಿದ್ದರು. ಅಲ್ಲದೆ, ಬಸ್ ಸ್ಟ್ಯಾಂಡ್ ಎದುರು ಇರುವ ಪಿರ್ಯಾದಿ ಹೋಟೆಲ್‌ಗೆ ಕಲ್ಲು ಹಾಗೂ ಸೋಡಾ ಬಾಟಲ್‌ಗಳನ್ನು ಬೀಸುವ ಮೂಲಕ ಹೋಟೆಲ್ ಸಾಮಗ್ರಿಗಳನ್ನು ನಾಶ ಪಡಿಸಿದ್ದರು.

ಹೀಗೆ ಬಿಜೆಪಿ ಹಿಂಪಡೆದಿರುವ ಎಲ್ಲಾ ಪ್ರಕರಣಗಳೂ ಸಮಾಜ ಘಾತುಕ, ಕೋಮು ದ್ವೇಷ ಹರಡಲು ಪ್ರಯತ್ನಿಸಿದ ಕ್ರಿಮಿನಲ್ ಪ್ರಕರಣಗಳೇ ಆಗಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಪ್ರರಕಣ ತನಿಖೆ ಹಂತದಲ್ಲಿರುವಾಗಲೇ ಸರ್ಕಾರ ಈ ಪ್ರಕರಣಗಳನ್ನು ಹಿಂಪಡೆದಿದೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಟಿಪ್ಪು ಜಯಂತಿ ವಿರುದ್ಧ ಅನುಮತಿ ಇಲ್ಲದೆ ನಡೆಸಿದ ಎಲ್ಲಾ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.


ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...