Homeಕರೋನಾ ತಲ್ಲಣರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಅಧಿವೇಶನ ಕರೆದು ಚರ್ಚಿಸಿ ಕೊರೊನಾ ನಿಯಂತ್ರಣಕ್ಕೆ ಒಟ್ಟಾಗಿ ಶ್ರಮಿಸೋಣ ಎಂದರೆ ಅದನ್ನೂ ಮಾಡುತ್ತಿಲ್ಲ. ಸರ್ಕಾರದ ಈ ಧೋರಣೆಯಿಂದ ರಾಜ್ಯದ ಜನ ಕಷ್ಟ ಅನುಭವಿಸುವಂತಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಕೊರೊನಾ ಆರೈಕೆ ಕೇಂದ್ರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದರೆ ಇದರಿಂದ ಸಾಕಷ್ಟು ಅನುಕೂಲವಾಗುತ್ತಿತ್ತು. ಇಂಥದ್ದೊಂದು ವ್ಯವಸ್ಥೆ ನಿರ್ಮಾಣ ಮಾಡುವಂತೆ ಮಾರ್ಚ್ ತಿಂಗಳಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲೇ ನಾವು ಸರ್ಕಾರಕ್ಕೆ ಸಲಹೆ ನೀಡಿದ್ದೆವು, ಆದರೆ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಸಿದ್ಧವಾಗುತ್ತಿರುವ ಕೊರೊನಾ ಚಿಕಿತ್ಸಾ ಕೇಂದ್ರಕ್ಕೆ ಅಗತ್ಯವಿರುವ 1800 ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಹಾಗೆಯೇ ಹಾಸಿಗೆ, ಮಂಚ ಖರೀದಿ ಪ್ರಕ್ರಿಯೆಯಲ್ಲೂ ಸಾಕಷ್ಟು ಗೊಂದಲವಿದೆ. ಇದರಿಂದ ಇನ್ನಷ್ಟು ವಿಳಂಬವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಆರಂಭವಾದಾಗಿಂದ ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಕಣ್ಣೆದುರೇ ಭ್ರಷ್ಟಾಚಾರ ನಡೆದರೂ ಪ್ರತಿಪಕ್ಷವಾಗಿ ಸುಮ್ಮನೆ ಕೂರಬೇಕೇ? ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವುದು ಕೆಟ್ಟ ರಾಜಕಾರಣವಾದರೆ, ಒಳ್ಳೆ ರಾಜಕಾರಣ ಯಾವುದು ಅಂತ ಅವರೇ ಹೇಳಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಬೆಂಗಳೂರಿನಲ್ಲಿ 300 kmph ವೇಗದಲ್ಲಿ ಬೈಕ್ ಓಡಿಸಿದ ಭೂಪ: ಸಿಸಿಬಿ ಬಲೆಗೆ – ವಿಡಿಯೋ ನೋಡಿ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

0
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು "ಕಿರುಕುಳ" ಮತ್ತು "ಬೆದರಿಕೆ" ಹಾಕುತ್ತಿದ್ದಾರೆ  ಎಂದು...